*ಸಿದ್ದಾಪುರ, ಅ. ೧: ಸಿದ್ದಾಪುರ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ೧೦೮ನೇ ಜಯಂತಿಯನ್ನು ಆಚರಿಸಲಾಯಿತು.

ಶಕ್ತಿ ಕೇಂದ್ರದ ಪ್ರಮುಖ್ ರೂಪೇಶ್, ಸಹ ಪ್ರಮುಖ್ ಡಿಜಿತ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ತುಳಸಿ ಗಣಪತಿ, ಸದಸ್ಯ ಆನಂದ, ಶಾಜಿ, ಸುರೇಶ್, ಇನ್ನಿತರರು ಉಪಸ್ಥಿತರಿದ್ದರು.

ಚೆಟ್ಟಳ್ಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕೂಡ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿಯನ್ನು ಆಚರಿಸಲಾಯಿತು. ಮಹಾನ್ ವ್ಯಕ್ತಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.