ಮಡಿಕೇರಿ, ಅ. ೧: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಷರ ಹಬ್ಬ ಸಾಹಿತ್ಯ ಉತ್ಸವ ಕಾರ್ಯಕ್ರಮ ನಡೆಯಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ. ಅನಂತ ಶಯನ ಉದ್ಘಾಟಿಸಿದರು.

ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಿಜಯ ಪಿ.ಆರ್. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಸಂಯೋಜಕಿ ದೀಕ್ಷಿತಾ ವರ್ಕಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಪ್ರಗತಿಪರ ಕೃಷಿಕ ಮಂದ್ರೀರ ತೇಜಸ್ ನಾಣಯ್ಯ, ವಿಜ್ಞಾನಿ ಡಾ. ಮಂಜುನಾಥ್ ಅವರುಗಳನ್ನು ವಿದ್ಯಾರ್ಥಿಗಳು ಸಂದರ್ಶಿಸಿದರು. ಕಥಾ ವಚನ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ನಡೆಸಿಕೊಟ್ಟರು. ಕವಿತಾ ವಾಚನ ಕಾರ್ಯಕ್ರಮ ಕನ್ನಡ ಉಪನ್ಯಾಸಕಿ ಪೂರ್ಣಿಮಾ ನಿರ್ವಹಿಸಿದರು. ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕಿ ಸ್ಮೀತಾ ಸುಬ್ಬಯ್ಯ ಉಪಸ್ಥಿತರಿದ್ದರು.

ಸಾಹಿತ್ಯ ಸ್ಪರ್ಧೆಗಳು, ರಸಪ್ರಶ್ನೆ, ಪುಸ್ತಕ ಪ್ರದರ್ಶನ, ಕಲಾಪ್ರದರ್ಶನ, ಸಾಧಕರ ಸಂದರ್ಶನ, ಪುಸ್ತಕ ಪರಿಚಯ, ಟ್ರೆಶರ್ ಹಂಟ್ ಇತ್ಯಾದಿ ಕಾರ್ಯಕ್ರಮಗಳು ನಡೆದವು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ನವೀನ್ ಅಂಬೆಕಲ್ಲು ಸಮಾರೋಪ ಭಾಷಣ ಮಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಸೂರ್ಯರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.