ಸಿದ್ದಾಪುರ, ಅ. ೧: ಸಿದ್ದಾಪುರದ ವಲಯ ಮಸೀದಿಗಳ ಒಕ್ಕೂಟದ ವತಿಯಿಂದ ಶುಕ್ರವಾರ ಸಂಜೆ ಈದ್ ಮಿಲಾದ್ ಸಂದೇಶ ಜಾಥಾ ನೆಲ್ಯಹುದಿಕೇರಿಯಿಂದ ಸಿದ್ದಾಪುರ ಪಟ್ಟಣದವರೆಗೆ ಸಾಗಿತು.

ಈ ಸಂದರ್ಭದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಮಸೀದಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.