ಮಡಿಕೇರಿ, ಅ. ೧: ಮೈಸೂರು ವಿಭಾಗ ಹಾಗೂ ರಾಜ್ಯಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಪಾರ್ಥ ಪಿ.ಎಸ್., ಮೊಹಮ್ಮದ್ ಅಕ್ಮಲ್ ಬಿ.ಹೆಚ್., ಅಬ್ದು ರೆಹಮಾನ್ ಭಾಗವಹಿಸಿ ಬೆಳ್ಳಿ ಪದಕ ಪಡೆದುಕೊಂಡಿದ್ದು, ಅಬ್ದು ರೆಹಮಾನ್ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿ ನವೆಂಬರ್‌ನಲ್ಲಿ ಮಹಾರಾಷ್ಟçದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.