ಕೂಡಿಗೆ, ಅ. ೨: ಕೂಡಿಗೆ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಆರೋಗ್ಯ ಕೇಂದ್ರದ ವತಿಯಿಂದ ಕೂಡಿಗೆ ಗ್ರಾಮ ಪಂಚಾಯಿತಿ ಆರೋಗ್ಯ ಪಡೆಗೆ ಆರೋಗ್ಯ ಪೋಷಣೆಯ ಬಗ್ಗೆ ತರಬೇತಿ ಕಾರ್ಯಾಗಾರ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಆರೋಗ್ಯ ಇಲಾಖೆಯ ವತಿಯಿಂದ ಪೋಷಣೆ ಯೋಜನೆ ಅನುಗುಣವಾಗಿ ಕೈಗೊಳ್ಳಲಾಗಿರುವ ಸಮರ್ಪಕವಾದ ವಿಷಯಗಳ ಬಗ್ಗೆ ಗ್ರಾಮ ಪಂಚಾಯಿತಿ ಆರೋಗ್ಯ ಪಡೆಗೆ ಮಾಹಿತಿಯನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರುಗಳಾದ ಟಿ.ಪಿ. ಹಮೀದ್, ಅನಂತ, ಕೆ.ಎಸ್. ಶಿವಕುಮಾರ್, ಮೋಹಿನಿ, ಮಂಗಳಾ, ಜಯಶೀಲಾ, ಅಭಿವೃದ್ಧಿ ಅಧಿಕಾರಿ ಮಂಜುಳಾ, ಕಾರ್ಯದರ್ಶಿ ಪುನೀತ್, ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.