ಕೂಡಿಗೆ, ಅ. ೨: ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ಸಹಕಾರ ಸಂಘದ ವಿಷಯಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳೊಂದಿಗೆ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರು ಸಂವಾದ ನಡೆಸುತ್ತಾ ಸಹಕಾರ ಸಂಘದ ರಚನೆ, ಅದರ ಬೆಳವಣಿಗೆ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಕೂಡಿಗೆ ಡೈರಿಗೆ ಮತ್ತು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಹಕಾರ ಸಂಘದ ನಿರ್ದೇಶಕರುಗಳಾದ ಜಯಶ್ರೀ, ಕೆ.ಬಿ. ರಾಮಚಂದ್ರ, ಕೆ.ಪಿ. ರಾಜು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮೀನಾ, ಸೈನಿಕ ಶಾಲೆಯ ಶಿಕ್ಷಕ ರಾಘವೇಂದ್ರ ರಾಜ್ ಅರಸ್, ವೆಂಕಟರಾಮಣ್ಣ, ಅಶೋಕನ್, ಮಹಂತೇಶ್, ಸುವಿತ್ ಮಹಾಲಕ್ಷಿ, ಪಾರ್ವತಿ, ಸುಬ್ಬರಂಗಯ್ಯ, ಸೇರಿದಂತೆ ಸಂಘದ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.