ಮಡಿಕೇರಿ, ಅ. ೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು ಮತ್ತು ಬಾಯ್ಲರ್ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥö್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರವು ನಗರದ ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಅರ್ಹ ಕಾರ್ಮಿಕರು ನೋಂದಣಿ ಮಾಡಿಸಿಕೊಂಡು ಪಡೆದುಕೊಳ್ಳಬೇಕೆಂದು ಹಾಗೂ ಕಾನೂನು ಸೇವಾ ಪ್ರಾಧಿಕಾರವು ಜನಸಾಮಾನ್ಯರಿಗೆ ಉಚಿತವಾಗಿ ಕಾನೂನು ಸೇವೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು. ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಟಿ. ಕಾವೇರಿ ಅವರು ಇಲಾಖೆಯ ವಿವಿಧ ಕಾರ್ಮಿಕ ಕಾಯ್ದೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಿ. ಧನರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಅರ್ಹ ಕಾರ್ಮಿಕರು ಪಡೆದುಕೊಳ್ಳ ಬೇಕೆಂದು ತಿಳಿಸಿದರು.
ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ನಾಜಿಯಾ ಸುಲ್ತಾನ್ ಅವರು ಕಾರ್ಮಿಕ ಇಲಾಖೆಯ ವಿವಿಧ ಕಾಯ್ದೆಗಳು, ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಜಿಲ್ಲಾ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತ ಪಿ. ಮುರುಳೀಧರನ್ ಹಾಗೂ ಕಾರ್ಮಿಕರ ರಾಜ್ಯ ವಿಮಾ ನಿಗಮ, ಶಾಖಾ ವ್ಯವಸ್ಥಾಪಕರಾದ ರವಿನಂದನ್ ಹೆಚ್.ಎಸ್, ಅವರು ಕಾರ್ಮಿಕರಿಗೆ ಹಾಗೂ ಉದ್ಯೋಗ ದಾತರಿಗೆ ಇರುವ ಸೌಲಭ್ಯಗಳ ಬಗ್ಗೆ ಪಿ.ಪಿ.ಟಿ. ಪ್ರೆಸೆಂಟೇಷನ್ ಮೂಲಕ ಮಾಹಿತಿ ನೀಡಿದರು.
ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳು, ಸೌಲಭ್ಯಗಳ ಬಗ್ಗೆ ಮಡಿಕೇರಿ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಯತ್ನಟ್ಟಿ ಎಂ.ಎA, ವೀರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ನಿಖಿಲ್ ಚಂದ್ರ ಪಿ.ಎಂ. ಹಾಗೂ ಸೋಮವಾರಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಶಶಿಧರ್ ಎಸ್, ಅವರು ಮಾಹಿತಿ ನೀಡಿದರು. ಈ ಸಂದರ್ಭ ವಿವಿಧ ಕಾರ್ಮಿಕ ಸಂಘಟ ನೆಗಳ ಮುಖ್ಯಸ್ಥರು, ಅಸಂಘಟಿತ ಕಾರ್ಮಿಕರು, ಉದ್ಯೋಗದಾತರು, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.