ಮಡಿಕೇರಿ, ಅ. ೫: ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ವಿವಿಧ ಶಾಲಾ-ಕಾಲೇಜು ಸಹಯೋಗ ದೊಂದಿಗೆ ಗುರುವಾರ ಜಿಲ್ಲಾ ಕೇಂದ್ರವಾದ ಮಡಿಕೇರಿ ನಗರದಲ್ಲಿ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಎಂಬ ಧ್ಯೇಯ ವಾಕ್ಯದೊಂದಿಗೆ ೭೦ನೇ ವನ್ಯಜೀವಿ ಸಪ್ತಾಹ ಅಂಗವಾಗಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು “ವನ್ಯಜೀವಿ ಸಂರಕ್ಷಣೆ ಗಾಗಿ ಕಾಲ್ನಡಿಗೆ ಜಾಗೃತಿ ಜಾಥಾ ನಡೆಯಿತು.

ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ರಾದ ಹೊಸಮನಿ ಪುಂಡಲೀಕ, ಪ್ರತಿ ಯೊಬ್ಬರೂ ನಿಸರ್ಗದ ನಿಯಮ ಗಳನ್ನು ಪರಿಪಾಲಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ಪರಿಸರ, ಪ್ರಕೃತಿ, ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ಹೊಂದಬೇಕು ಎಂದರು.

ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಿದಾಗ ಮಾತ್ರ ಪ್ರಕೃತಿ, ಪರಿಸರ ಉಳಿಯಲು ಸಾಧ್ಯ. ಇದರಿಂದ ಪರಿಸರ ಸಮತೋಲನ ಕಾಯ್ದುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಅರಣ್ಯಕ್ಕೆ ನಾವು ಯಾವುದೇ ಹಾನಿ ಉಂಟು ಮಾಡದೇ ಸಸ್ಯ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಅರಣ್ಯ ಇಲಾಖೆಯ ವತಿಯಿಂದ ಹಮ್ಮಿ ಕೊಂಡಿರುವ ವನ್ಯಜೀವಿ ಸಪ್ತಾಹ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಉಳಿವಿಗೆ ನಿರಂತರ ಪ್ರಯತ್ನ ಅಗತ್ಯ ಎಂದರು. ಅರಣ್ಯ ಇಲಾಖೆಯು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ವಹಿಸಿರುವ ವಿಶೇಷ ಕಾಳಜಿ ಶ್ಲಾಘನೀಯವಾದುದು. ಈ ಕಾಲ್ನಡಿಗೆ ಜಾಥಾವು ಜನರಲ್ಲಿ ಅರಣ್ಯ, ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು. ಕೊಡಗು ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ ಮಾತನಾಡಿ, ಪ್ರತಿಯೊಬ್ಬರೂ ಅರಣ್ಯ ಇಲಾಖೆಯ ಇಂತಹ ಜನ ಜಾಗೃತಿ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಕೋರಿದರು.

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡೆಲ್ ಅಧಿಕಾರಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮ ಕುಮಾರ್, ಇಂದು ನಾವು ಅರಣ್ಯ ಮತ್ತು ವನ್ಯಜೀವಿಗಳ ಜೊತೆಯೇ ಬಾಳುವುದನ್ನು ಕಲಿಯಬೇಕು. ಆಗ ಮಾತ್ರ ಪ್ರಕೃತಿ ಮತ್ತು ಪರಿಸರ ಸಮತೋಲನದಿಂದ ಇರಲು ಸಾಧ್ಯ. ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ನಾವು ಪಣತೊಡಬೇಕು ಎಂದರು.

ಮಡಿಕೇರಿ ವನ್ಯಜೀವಿ ವಿಭಾಗದ ಡಿಸಿಎಫ್ ಕೆ.ಎ. ನೆಹರು ವನ್ಯಜೀವಿ ಸಪ್ತಾಹ ಆಚರಣೆಯ ಉದ್ದೇಶ ತಿಳಿಸಿದರು. ಜಾಥಾದಲ್ಲಿ ಭಾಗವಹಿಸಿದ್ದ ಡಿಡಿಪಿಐ ಸಿ. ರಂಗಧಾಮಪ್ಪ ಮಾತನಾಡಿ, ಮುಂದಿನ ಪೀಳಿಗೆಗಾಗಿ ನಾವು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು. ಜಾಥಾದಲ್ಲಿ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್. ವೆಂಕಟನಾಯಕ್, ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತ ಘೋಷವಾಕ್ಯಗಳನ್ನು ಹೇಳಿದರು.

ವನ್ಯಜೀವಿ ಸಪ್ತಾಹ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದ ಸಿಸಿಎಫ್ ಮನೋಜ್ ಕುಮಾರ್ ತ್ರಿಪಾಠಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನಾರ್ವಡೆ, ವಿರಾಜಪೇಟೆ ಪ್ರಾದೇಶಿಕ ವಿಭಾಗದ ಡಿಸಿಎಫ್, ಎನ್.ಹೆಚ್. ಜಗನ್ನಾಥ್, ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಸಂದೀಪ್ ಪಿ. ಅಭಯಂಕರ್, ಅರಣ್ಯ ಸಂಚಾರಿ ದಳದ ಡಿಸಿಎಫ್ ಸೈಯದ್ ಅಹಮದ್ ಶಾ ಹುಸೇನ್, ಡಿಡಿಪಿಐ ಸಿ. ರಂಗಧಾಮಪ್ಪ, ಭಾರತ್ ಸ್ಕೌಟ್ಸ್, ಗೈಡ್ಸ್ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಅವರು ವಿದ್ಯಾರ್ಥಿಗಳೊಂದಿಗೆ ೪ ಕಿ.ಮೀ. ಕಾಲ್ನಡಿಗೆ ಜಾಥಾದಲ್ಲಿ ಕ್ರಮಿಸಿ ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು. ವನ್ಯಜೀವಿ ವಿಭಾಗದ ಎಸಿಎಫ್ ಶ್ರೀನಿವಾಸ ನಾಯಕ್, ಎಸಿಎಫ್ ಕೆ.ಪಿ. ಗೋಪಾಲ್, ಎ.ಎ. ಗೋಪಾಲ್, ಪುಷ್ಪಗಿರಿ ವನ್ಯಜೀವಿ ವಿಭಾಗದ ಆರ್‌ಎಫ್ ಕೋಟ್ರೇಶ್, ಶಮ, ಮರಿಸ್ವಾಮಿ, ರತನ್ ಕುಮಾರ್, ಪೂಜಾಶ್ರೀ, ಗಂಗಾಧರ್, ಶೈಲೇಂದ್ರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ಜಿಲ್ಲಾ ಸ್ಥಾನೀಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನ, ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು. ರಂಜಿತ್, ಗೈಡ್ಸ್ ತರಬೇತಿ ಆಯುಕ್ತೆ ಮೈಥಲಿರಾವ್, ಗೈಡ್ಸ್ ಶಿಕ್ಷಕಿ ಪ್ರೇಮ, ಜಾಥಾದಲ್ಲಿ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್. ವೆಂಕಟನಾಯಕ್, ಹೆಬ್ಬಾಲೆ ಪ್ರೌಢಶಾಲೆಯ ಶಿಕ್ಷಕರಾದ ಸಿ.ಡಿ. ಲೋಕೇಶ್, ಭೋಜೇಗೌಡ, ಶಿಕ್ಷಕರ ಸೊಸೈಟಿ ನಿರ್ದೇಶಕ ಎಸ್.ಆರ್. ಶಿವಲಿಂಗ, ಅರಣ್ಯ ಇಲಾಖೆಯ ಅಧಿಕಾರಿಗಳು, ಆರ್. ಎಫ್.ಓ.ಗಳು, ಡಿ.ಆರ್. ಎಫ್.ಓ.ಗಳು, ಅರಣ್ಯ ಫಾರೆಸ್ಟ್ಗಳು, ಅರಣ್ಯ ವೀಕ್ಷಕರು, ಸಿಬ್ಬಂದಿ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ನಾಗರಿಕರು ಭಾಗವಹಿಸಿದ್ದರು.

ಅರಣ್ಯ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ವನ್ಯಜೀವಿ ಸಪ್ತಾಹ ಜಾಥಾವು ಮಡಿಕೇರಿ ನಗರದ ಅರಣ್ಯ ಭವನದಿಂದ ಆರಂಭಗೊAಡು ಮಡಿಕೇರಿ ನಗರದ ಮುಖ್ಯ ರಸ್ತೆಯ ಮೂಲಕ ಟೌನ್‌ಹಾಲ್, ಚೌಕಿ ಮತ್ತು ಮಹದೇವಪೇಟೆ ಮಾರ್ಗವಾಗಿ ೪ ಕಿ.ಮೀ. ನಷ್ಟು ದೂರ ಕ್ರಮಿಸಿ ಸ್ವಾಗತಬೆಟ್ಟದ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ನಲ್ಲಿ ಕಾಲ್ನಡಿಗೆ ಜಾಥಾ ಸಮಾಪನಗೊಂಡಿತು.

ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ: ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆಗೆ ಸಂಬAಧಿಸಿದ ವಿವಿಧ ಘೋಷಣಾ ಫಲಕಗಳನ್ನು ಹಿಡಿದು ಜಾಥಾದಲ್ಲಿ ತೆರಳಿದ ವಿದ್ಯಾರ್ಥಿಗಳು ನಾಗರಿಕರಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸಿದರು.

ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್, ರಾಷ್ಟಿçÃಯ ಸೇವಾ ಯೋಜನೆ, (ಎನ್‌ಎಸ್‌ಎಸ್) ಘಟಕದ ವಿದ್ಯಾರ್ಥಿಗಳು, ನಗರದ ಸಂತ ಜೋಸೆಫರ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು, ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಘೋಷಣಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಪ್ರಚುರಪಡಿಸಿದರು.

ವನ್ಯಜೀವಿ ಸಪ್ತಾಹ ನಡಿಗೆ ಜಾಥಾದಲ್ಲಿ ಅರಣ್ಯ, ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತಾದ ಭಿತ್ತಿಫಲಕಗಳನ್ನು ಹಿಡಿದು ಸಾಗಿದ ಸ್ವಯಂ ಸೇವಕರು ಅರಣ್ಯ, ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಘೋಷಣೆಗಳನ್ನು ಕೂಗುವ ಮೂಲಕ ನಾಗರಿಕರ ಗಮನ ಸೆಳೆದರು.

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಕಾಡೇ ರಾಷ್ಟ್ರದ ಸಂಪತ್ತು, ಹಸಿರೇ ಉಸಿರು, ಪಶ್ಚಿಮಘಟ್ಟಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ, ನಮ್ಮ ನಡಿಗೆ ವನ್ಯಜೀವಿಗಳ ಕಡೆಗೆ, ಕಾಡಿನ ರಕ್ಷಣೆಯೇ ವನ್ಯಜೀವಿಗಳ ಉಳಿವಿನ ಹಾದಿ, ನಮ್ಮ ನಡಿಗೆ ಹಸಿರೆಡೆಗೆ, ಅಭಯಾರಣ್ಯಗಳ ರಕ್ಷಣೆಗೆ ಬೇಕು ಆದ್ಯತೆ ಎಂಬಿತ್ಯಾದಿ ಘೋಷಣೆಗಳನ್ನು ಪ್ರಚುರ ಪಡಿಸಲಾಯಿತು.

ವನ್ಯಜೀವಿ ವಿಭಾಗದ ಎಸಿಎಫ್ ಶ್ರೀನಿವಾಸ್ ನಾಯಕ್, ಪುಷ್ಪಗಿರಿ ವನ್ಯಜೀವಿ ವಲಯದ ಆರ್‌ಎಫ್‌ಓ ಕೋಟ್ರೇಶ್ ಜಾಥಾದ ಉಸ್ತುವಾರಿ ವಹಿಸಿದ್ದರು.