ಮಡಿಕೇರಿ, ಅ. ೬: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಅಧಿಕಾರಿಗಳು, ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾ.೭ರಂದು (ಇಂದು) ನಗರದ ಜಿ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ.
ಬೆಂಗಳೂರಿನಲ್ಲಿ ಹೋರಾಟ ಮಾಡಿಯೂ ಬೇಡಿಕೆಗಳು ಈಡೇರದ ಹಿನ್ನೆಲೆ ರಾಜ್ಯ ವ್ಯಾಪ್ತಿಯ ಎಲ್ಲಾ ಜಿ.ಪಂ. ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.