ಮಡಿಕೇರಿ, ಅ. ೬: ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾAಶದೊAದಿಗೆ ೨೦೦೬ ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾAಶವನ್ನು ಸಂಯೋಜನೆ ಮಾಡಲಾಗಿರುತ್ತದೆ ಹಾಗೂ ಜಮೀನಿನ ಸರ್ವೇ ನಕ್ಷೆ(ಸ್ಕೆಚ್)-ನಮೂನೆ ೧೧ ಇ ಇರುವ ಮೊಜಣಿ ತಂತ್ರಾAಶದೊAದಿಗೆ ಕಾವೇರಿ ತಂತ್ರಾAಶದೊAದಿಗೆ ಕಾವೇರಿ ತಂತ್ರಾAಶವನ್ನು ದಿನಾಂಕ: ೦೫-೧೦-೨೦೧೬ ರಿಂದ ಸಂಯೋಜನೆ ಮಾಡಲಾಗಿದೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾAಶವನ್ನು ದಿನಾಂಕ: ೧೮-೦೭-೨೦೧೪ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.

ಈ ಮೇಲೆ ಕಾಣಿಸಿದ ಆಸ್ತಿಗಳನ್ನು ಹೊರತುಪಡಿಸಿ ಅಂದರೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬAಧಿಸಿದAತೆ ಇ-ಆಸ್ತಿ ತಂತ್ರಾAಶವನ್ನು ರೂಪಿಸಿದ್ದು ಇ-ಆಸ್ತಿ ತಂತ್ರಾAಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬAಧಿಸಿದAತೆ ಕಾವೇರಿ-೨.೦ ತಂತ್ರಾAಶದೊAದಿಗೆ ಸಂಯೋಜನೆ ಮಾಡಿ ದಿನಾಂಕ: ೨೯-೦೧-೨೦೨೦ ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬAಧಿಸಿದAತೆ ಇ-ಆಸ್ತಿ ತಂತ್ರಾAಶ ಮತ್ತು ಕಾವೇರಿ ತಂತ್ರಾAಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ಕೊಡಗು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾAಶದಿAದ ಕಡ್ಡಾಯವಾಗಿ ಮಾಹಿತಿ ಪಡೆದು, ನೋಂದಾಯಿಸಲು ಇ-ಆಸ್ತಿ ತಂತ್ರಾAಶವನ್ನು ಕಾವೇರಿ-೨ ತಂತ್ರಾAಶದೊAದಿಗೆ ದಿನಾಂಕ: ೦೭-೧೦-೨೦೨೪ ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ ಕಂಇ/೨೦/ಎAಎನ್‌ಎAಯು /೨೦೨೩, ಬೆಂಗಳೂರು. ದಿನಾಂಕ ೨೩-೦೯-೨೦೨೪ರ ಆದೇಶದ ಮೂಲಕ ಆದೇಶಿಸಲಾಗಿದೆ. ಆದಕಾರಣ ದಿನಾಂಕ: ೦೭-೧೦-೨೦೨೪ ರಿಂದ ಕೊಡಗು ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾAಶದಿAದಲೇ ಪಡೆಯಬೇಕಿರುತ್ತದೆ.

ಇ-ಆಸ್ತಿ ಸಂಯೋಜನೆಯಿAದ ಸಾರ್ವಜನಿಕರಿಗೆ ಈ ಕೆಳಕಂಡ ಉಪಯೋಗಗಳಾಗುತ್ತದೆ.

* ಇ-ಆಸ್ತಿ ತಂತ್ರಾAಶದಿAದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸಹೋಗುವುದನ್ನು ತಡೆಯಬಹುದಾಗಿದೆ.

* ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.

* ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸಬಹುದಾಗಿರುತ್ತದೆ.

* ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ನೆರವಾಗುತ್ತದೆ.

* ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ/ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದೆ.

ಸಾರ್ವಜನಿಕರು ಕಾವೇರಿ-೨ ತಂತ್ರಾAಶದೊAದಿಗೆ ಇ-ಆಸ್ತಿ ತಂತ್ರಾAಶದ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೊಡಗು ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ತಿಳಿಯಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆದೇಶದ ಕುರಿತು ಮಾಹಿತಿ ಒದಗಿಸಿದ್ದಾರೆ.