ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತಿçÃಜಿ ಅವರ ಜನ್ಮದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಮತ್ತು ಶಾಸ್ತಿç ಅವರ ಜೀವನ ಮತ್ತು ಆದರ್ಶ, ಸರಳತೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದರು.

ಈ ಸಂದರ್ಭ ಉಪ ಪ್ರಾಂಶುಪಾಲೆ ಪ್ರೊ. ಎಂ.ಎಸ್. ಭಾರತಿ, ಎನ್‌ಸಿಸಿ, ಎನ್‌ಎಸ್‌ಎಸ್, ರೋವರ್ಸ್ ಮತ್ತು ರೇಂಜರ್ಸ್ ಅಧಿಕಾರಿಗಳು, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ಕಾರ್ಯಕ್ರಮದ ಅಂಗವಾಗಿ ಎನ್‌ಎಸ್‌ಎಸ್, ಎನ್‌ಸಿಸಿ, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಕಾಲೇಜು ಆವರಣ ಮತ್ತು ಆವರಣದ ಹೊರಭಾಗ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಪೊನ್ನಂಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಹಿರಿಯ ಅಂತರರಾಷ್ಟೀಯ ಓಟಗಾರರಾದ ಪೆಮ್ಮಂಡ ಅಪ್ಪಯ್ಯ ಅವರು ಭಾಗವಹಿಸಿ ಗಾಂಧೀಜಿ , ಶಾಸ್ತಿç ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳು ದೇಶ ಭಕ್ತಿಗೀತೆ ಹಾಡಿದರು. ಈ ಸಂದರ್ಭ ಮುಖ್ಯ ಶಿಕ್ಷಕರಾದ ಬಿ.ಎಂ. ವಿಜಯ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ನಾಗವೇಣಿ, ಶಿಕ್ಷಕರಾದ ಫಿಲೋಮಿನ ವಿ.ಜೆ., ಜಾನ್ಸಿ ಎಂ.ಎ., ರೋಜಿ, ಐ.ಎಂ., ಮಂಗಳಾAಗಿ, ಶಕೀಲಬಾನು, ಗಂಗಾಮಣಿ, ವಿನಿತ, ನಿಂಗರಾಜ್, ಅತಿಥಿ ಶಿಕ್ಷಕರು, ಸಹಾಯಕಿಯರು, ಅಕ್ಷರ ದಾಸೋಹ ಸಿಬ್ಬಂದಿ, ಪೋಷಕರು ಹಾಜರಿದ್ದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲೇ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಐಗೂರು: ಗಾಂಧಿ ಜಯಂತಿ ಪ್ರಯುಕ್ತ ಹರದೂರು ಗ್ರಾಂ. ಪಂಚಾಯಿತಿ ವತಿಯಿಂದ ಸ್ಥಳೀಯ ಸರ್ಕಾರಿ ಶಾಲಾ ಆವರಣದಿಂದ ಹರದೂರು ಸೇತುವೆವರೆಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛತೆಯ ಬಗ್ಗೆ ಪಂಚಾಯಿತಿ ಸದಸ್ಯರು, ಶಾಲಾ ಮಕ್ಕಳು ಮತ್ತು ಶಿಕ್ಷಕರು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ, ಉಪಾಧ್ಯಕ್ಷ ಸಲೀಂ ಹೊಸತೋಟ, ಪಿಡಿಓ ಪೂರ್ಣಿಮಾ, ಕಾರ್ಯದರ್ಶಿ ನವ್ಯ, ಪಂಚಾಯಿತಿ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಕಡಂಗ: ಕಡಂಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಹಾತ್ಮರ ಜೀವನದ ಕುರಿತು ಪಂಚಾಯಿತಿ ಸದಸ್ಯರು ಮಾತನಾಡಿದರು.ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಪಂಚಾಯಿತಿ ಸದಸ್ಯರಾದ ಸುಬೀರ್ ಸಿ.ಇ., ಪಾಂಡAಡ ರಾಣಿ ಗಣಪತಿ, ಪಿಡಿಓ ಆಶಾಕುಮಾರಿ ಹಾಗೂ ಇತರರು ಇದ್ದರು. ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷೆ ರತ್ನಾ ವಹಿಸಿದ್ದರು.

ದಿನದ ಮಹತ್ವದ ಕುರಿತು ಮುಖ್ಯ ಶಿಕ್ಷಕಿ ಎಚ್.ಆರ್. ಪ್ರೇಮಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಭಾಷಣ, ಹಾಡು, ದೇಶಭಕ್ತಿ ಗೀತೆ ರಾಷ್ಟçಗೀತೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು, ಶಾಲಾ ಶಿಕ್ಷಕ ವೃಂದ ಹಾಗೂ ಎಸ್ ಡಿಎಂಸಿ ಸದಸ್ಯರು ಸೇರಿ ಶಾಲೆಯ ವಠಾರದಲ್ಲಿ ಶ್ರಮದಾನದ ಮೂಲಕ ಶುಚಿಗೊಳಿಸಿದರು. ಈ ಸಂದರ್ಭ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಲಲಿತಾ, ಶಿಕ್ಷಕಿಯರಾದ ಜಯಪ್ರದ, ದಮಯಂತಿ, ಸತ್ಯಮ್ಮ, ಎಸ್ ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಕಡಂಗ : ಕಡಂಗದ ವಿಜಯ ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçಯವರ ೧೨೦ನೇ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಂಧಿ ಮತ್ತು ಶಾಸ್ತಿçಯವರ ತತ್ವಗಳು ಹಾಗೂ ಹೋರಾಟದ ಕುರಿತು ಶಾಲೆಯ ಮುಖ್ಯೋಪಾಧ್ಯಾಯಿನಿ ಪಟ್ರಪಂಡ ಬೋಜಮ್ಮ ಅವರು ಮಾತನಾಡಿ, ಮಕ್ಕಳಿಗೆ ಹಿತೋಪದೇಶ ನೀಡಿದÀರು. ವಿದ್ಯಾರ್ಥಿಗಳಾದ ಫರ್ಹಾನ , ಜುಮಾನ, ಆಫಿಲ್ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಮಕ್ಕಳು ಮತ್ತು ಶಿಕ್ಷಕರು ಶ್ರಮದಾನ ಮಾಡುವುದರಿಂದ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಚೆಯ್ಯಂಡಾಣೆ: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನರಿಯಂದಡ ಗ್ರಾಮ ಪಂಚಾಯಿತಿಯ ಸಂಜೀವಿನಿ ಒಕ್ಕೂಟದ ವತಿಯಿಂದ ಚೇಲಾವರ ಜಲಪಾತ ಹಾಗೂ ರಸ್ತೆಯ ಬದಿಗಳಲ್ಲಿದ್ದ ಕಸ, ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಶುಚಿಗೊಳಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಮುಂಡಿಯ್ಯೊಳAಡ ಪ್ರವೀಣ್ ಈರಪ್ಪ, ಮಂಜುಳಾ, ಸಂಜೀವಿನಿ ಒಕ್ಕೂಟದ ಎಂಬಿಕೆ ವಸಂತಿ, ಶಶಿಕಲಾ, ದಮಯಂತಿ, ರಾಜೇಶ್ವರಿ,ಲೇಖನ, ಮಮತಾ ಮತ್ತಿತರರು ಇದ್ದರು.ಮುಳ್ಳೂರು: ಸಮೀಪದ ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲಾ ಮಕ್ಕಳು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತಿç ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಕ್ಕಳು ಗಾಂಧೀಜಿಯವರ ಬಾಲ್ಯ, ಅವರ ವಿದ್ಯಾಭ್ಯಾಸ, ಸ್ವಾತಂತ್ರö್ಯವನ್ನು ತಂದುಕೊಟ್ಟ ಅವರ ಅಹಿಂಸೆಯ ಮಾರ್ಗ ಇವುಗಳ ಕುರಿತು ತಮ್ಮ ತಮ್ಮ ಭಾಷಣಗಳಲ್ಲಿ ತಿಳಿಸಿದರು. ಶಾಲಾ ಸಹ ಶಿಕ್ಷಕ ಜಾನ್ ಪಾಲ್ ಡಿಸೋಜ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಶಾಲಾ ಮುಖ್ಯ ಶಿಕ್ಷಕ ಸಿ.ಎಸ್.ಸತೀಶ್ ವಿದ್ಯಾರ್ಥಿಗಳಿಗೆ ಗಾಂಧೀಜಿಯವರ ಸಾಕ್ಷö್ಯ ಚಿತ್ರವನ್ನು ಪ್ರದರ್ಶನ ಮಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಗಾಂಧೀಜಿಯ ಕುರಿತು ಅರಿವು ಮೂಡಿಸಿದರು. ಗಾಂಧಿ ಜಯಂತಿ ಪ್ರಯುಕ್ತ ಶಾಲಾ ಸಹ ಶಿಕ್ಷಕಿ ಶೀಲಾ ವಿದ್ಯಾರ್ಥಿಗಳಿಗೆ ಸ್ವಚ್ಚತೆಯ ಕುರಿತಾಗಿ ಚಿತ್ರಕಲೆ ಸ್ಪರ್ಧೆ ನಡೆಸಿಕೊಟ್ಟರು. ನಂತರ ವಿದ್ಯಾರ್ಥಿಗಳು ಶಾಲಾ ಆವರಣದ ಕೈತೋಟವನ್ನು ಶ್ರಮದಾನದ ಮೂಲಕ ಶ್ವಚ್ಚಗೊಳಿಸಿದರು.ಸುಂಟಿಕೊಪ್ಪ : ಕೆದಕಲ್ ಗ್ರಾಮ ಪಂಚಾಯಿತಿಯ ಹೊರೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಗಾಂದಿ ಮತ್ತು ಲಾಲ್ ಬಹದೂರ್ ಶಾಸ್ತಿç ಅವರ ಜನ್ಮ ದಿನವನ್ನು ಆಚರಿಸಲಾಯಿತು.

ಗಾಂಧಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಜೆಸಿಐ ಸಂಸ್ಥೆ ವತಿಯಿಂದ ಶಾಲಾ ಮಕ್ಕಳಿಗೆ ದಾನಿಗಳ ಮುಖಾಂತರ ಟೈ ಬೆಲ್ಟ್, ಗುರುತಿನ ಚೀಟಿ ಹಾಗೂ (ಮನೆಗೊಂದು ಮರ)ಪರಿಸರ ಉಳಿವಿಗಾಗಿ ಮಣ್ಣಿನಿಂದ ತಯಾರಿಸಿದ ಸೀಡ್ ಬಾಲ್ (ಬೀಜ) ವಿತರಿಸಲಾಯಿತು. ಈ ಸಂದರ್ಭ ಜೆಸಿಐ ಸಂಸ್ಥೆ ಅಧ್ಯಕ್ಷ ಸಂಪತ್ ಕುಮಾರ್, ವಲಯ ಪೂರ್ವ ಅಧ್ಯಕ್ಷರಾದ ದೇವಿ ಪ್ರಸಾದ್, ವಲಯ ಪೂರ್ವ ಕಾರ್ಯದರ್ಶಿ ಡೆನ್ನೀಸ್ ಡಿಸೋಜ, ಶಿಕ್ಷಕಿ ನಾಗರತ್ನ, ರೋಸ್ಲಿನ್ ಹಾಜರಿದ್ದರು.

ಐಗೂರು: ಗಾಂಧಿ ಜಯಂತಿ ಪ್ರಯುಕ್ತ ಐಗೂರು ಸ. ಪ.ಪೂರ್ವ ಕಾಲೇಜು ಐಗೂರು ಮತ್ತು ಪ್ರೌಢಶಾಲಾ ವತಿಯಿಂದ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ನಂತರ ಸ್ವಚ್ಛ ಭಾರತದ ಬಗ್ಗೆ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿ, ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವೃಂದದವರು ಸ್ವಚ್ಛತಾ ಕಾರ್ಯವನ್ನು ನಿರ್ವಹಿಸಿದರು.

ಈ ಕಾರ್ಯಕ್ರಮದಲ್ಲಿ ಪ.ಪೂರ್ವ ಕಾಲೇಜಿನ ಪ್ರಾಂಶುಪಾಲ ಉಮೇಶ್, ಶಿಕ್ಷಕ ವೃಂದ, ಪ್ರೌಢಶಾಲಾ ಮುಖ್ಯ ಶಿಕ್ಷಕ ಯಶ್ವಂತ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟçಪಿತ ಮಹಾತ್ಮ. ಗಾಂಧೀಜಿ ಅವರ ೧೫೫ ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ೧೨೦ ನೇ ಜಯಂತಿಯನ್ನು ಆಚರಿಸಲಾಯಿತು.

ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಶಾಲೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟಿçÃಯ ಸೇವಾ ಯೋಜನೆ (ಎಸ್.ಎಸ್.ಎಸ್.) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕದ ವತಿಯಿಂದ ಈ ವರ್ಷದ ಸ್ವಚ್ಛ ಭಾರತ್ ಮಿಷನ್ ಧ್ಯೇಯವಾದ ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ ೨೦೨೪ ರ ಅಂಗವಾಗಿ ಕೂಡ್ಲೂರು ಗ್ರಾಮದಲ್ಲಿ ಸ್ವಚ್ಛತೆಯೇ ಸೇವೆ ಸ್ವಚ್ಛತಾ ಹೀ ಆಂದೋಲನ ನಡೆಸಲಾಯಿತು.

ಸ್ವಚ್ಛತೆಯೆ ಅಭಿಯಾನವು ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿದೆ ಎಂದು ಮುಖ್ಯ ಶಿಕ್ಷಕ ಪ್ರೇಮ ಕುಮಾರ್ ತಿಳಿಸಿದ್ದಾರೆ. ಜಾಥಾದಲ್ಲಿ ಸ್ವಚ್ಚತೆಯ ಮಹತ್ವ ಕುರಿತು ಮಾಹಿತಿ ನೀಡಿದ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ವಿದ್ಯಾರ್ಥಿಗಳು ಪರಿಸರ ಸ್ವಚ್ಚತೆಗೆ ಜತೆಗೆ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ವಿದ್ಯಾರ್ಥಿನಿ ಕೆ.ಎಂ.ಮಮತ ಮಾತನಾಡಿ, ವಿದ್ಯಾರ್ಥಿಗಳಾದ ನಾವು ಪರಿಸರ ಸ್ವಚ್ಚತೆಗೆ ಸಂಕಲ್ಪ ತೊಡಬೇಕು ಎಂದರು. ಗಾಂಧಿ ನಡಿಗೆ - ಸ್ವಚ್ಚತಾ ನಡಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಗ್ರಾಮದಲ್ಲಿ ನಡೆಸಿದ ಪರಿಸರ ಸ್ವಚ್ಛತಾ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಸ್ವಚ್ಚತಾ ಹೀ ಸೇವಾ ಅಭಿಯಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.

ಜಾಥಾದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆ, ಪರಿಸರ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಪರಿಸರ ಘೋಷಣೆಗಳನ್ನು ಕೂಗಿದರು. ಇದಕ್ಕೂ ಮೊದಲು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜತೆಗೂಡಿ ಶಾಲಾವರಣದಲ್ಲಿ ಶ್ರಮದಾನ ನಡೆಸಿದರು.