ಕೂಡಿಗೆ, ಅ. ೬: ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಮತ್ತು ರಿಪಬ್ಲಿಕ್ ಪಾರ್ಟಿ ಇಂಡಿಯಾ ಕರ್ನಾಟಕ ಪಕ್ಷ ಜಿಲ್ಲಾ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ. ರಾಜು ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಸುವಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ಸರಕಾರ ವಾಪಸ್ ಪಡೆದಿದೆ ಎಂಬ ಅನೇಕ ವಿಷಯಗಳಿಗೆ ಸಂಬAಧಿಸಿದAತೆ ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿಯ ಮುಂಭಾಗದ ಪ್ರತಿಭಟನೆಯನ್ನು ನಡೆಸಿದರು.

ಕುಶಾಲನಗರ ಪುರಸಭೆ ವ್ಯಾಪ್ತಿಯ ಅನೇಕ ಬಡ ಕುಟುಂಬದವರಿಗೆ ನಿವೇಶನ ನೀಡಿ ಮನೆಗಳ ನಿರ್ಮಾಣ ಮಾಡಿಕೊಡಬೇಕು ಮತ್ತು ಹಕ್ಕುಪತ್ರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿ ನಂತರ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಮನವಿ ಪತ್ರವನ್ನು ನೀಡಿದರು.

ಈ ಸಂದರ್ಭ ಸಂಘಟನೆಯ ಸಂಚಾಲಕ ಕೆ.ಬಿ. ರಾಜು ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.