ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ೨೧ ಮಂದಿ ಬಲಿ
ದೇರ್‌ಅಲ್-ಬಾಲಾ, ಅ. ೬: ಮಧ್ಯ ಗಾಜಾ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಟ ೨೧ ಜನರು ಮೃತಪಟ್ಟಿದ್ದಾರೆ ಎಂದು ಪ್ಯಾಲೇಸ್ತೀನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ದೇರ್ ಅಲ್-ಬಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊAಡ ಜನರಿಗೆ ಆಶ್ರಯ ನೀಡುತ್ತಿರುವ ಮಸೀದಿ ಮೇಲೆ ದಾಳಿ ನಡೆಸಲಾಗಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ. ಮಧ್ಯ ಗಾಜಾದ ದೇರ್ ಅಲ್-ಬಲಾಹ್‌ನಲ್ಲಿರುವ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಗೇಟ್‌ನ ಮುಂದೆ ಸ್ಥಳಾಂತರಗೊAಡ ಜನರಿಗೆ ಆಶ್ರಯ ನೀಡುವ ಮಸೀದಿಯ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು, ಅದರ ಪರಿಣಾಮವಾಗಿ ಸಾವಿನ ಸಂಖ್ಯೆ ೨೧ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಗಾಯಾಳುಗಳು ಕೂಡ ಸೇರಿದ್ದಾರೆ ಎಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ತಿಳಿಸಿದ್ದಾರೆ. ಮಸೀದಿಯಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಭಯೋತ್ಪಾದಕರ ಮೇಲೆ ನಿಖರವಾದ ದಾಳಿ ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ. ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಇತ್ತೀಚಿನ ದಾಳಿಗಳು ಗಾಜಾದಲ್ಲಿ ಹೆಚ್ಚುತ್ತಿರುವ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ ೪೨ ಸಾವಿರಕ್ಕೆ ಸಮೀಪದಲ್ಲಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. ನಿನ್ನೆ ಮುಂಜಾನೆ ಇಸ್ರೇಲ್ ಲೆಬನಾನ್ ಮೇಲೆ ದಾಳಿ ಮಾಡಿದ ನಂತರ ಹಿಜ್ಬುಲ್ಲಾ ಮತ್ತು ಹಮಾಸ್ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು.
ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ - ರಾಹುಲ್
ನವದೆಹಲಿ, ಅ. ೬: ಗೋವಾದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಗಲಭೆ ಎಬ್ಬಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ರಾಜ್ಯ ಮತ್ತು ಇಡೀ ಭಾರತದ ಜನರು ಈ ವಿಭಜನೆಯನ್ನು ನೋಡುವುದರಿಂದ ಆಡಳಿತ ಪಕ್ಷದ ಪ್ರಯತ್ನಗಳಿಗೆ ತಡೆಯೊಡ್ಡಲಾಗುವುದು ಎಂದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದೆ, ಮಾಜಿ ಆರ್‌ಎಸ್‌ಎಸ್ ನಾಯಕರೊಬ್ಬರು ಕ್ರಿಶ್ಚಿಯನ್ನರನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಸಂಘಟನೆಗಳು ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುತ್ತಿವೆ ಎಂದು ಅವರು ಬರೆದುಕೊಂಡಿದ್ದಾರೆ.
ಸಚಿವ ಭೈರತಿ ಸುರೇಶ್ - ಲೋಕಾಯುಕ್ತ ಅಧಿಕಾರಿ ವಿರುದ್ಧ ದೂರು
ಮೈಸೂರು, ಅ. ೬: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಕಡತ ನಾಪತ್ತೆ ಪ್ರಕರಣಕ್ಕೆ ಸಂಬAಧಿಸಿದAತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್.ಪಿ. ಸಜಿತ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ದೂರು ನೀಡಿದ್ದಾರೆ. ಡಿಜಿಪಿ ಅಲೋಕ್ ಮೋಹನ್ ಅವರಿಗೆ ಲಿಖಿತ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಕಳೆದ ಜು. ೨೬ ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ಲೋಕಾಯುಕ್ತ ನಿರ್ಧರಿಸಿತ್ತು. ಈ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಎಸ್‌ಪಿ ಸಜಿತ್ ಅವರು ಭೈರತಿ ಸುರೇಶ್ ಅವರಿಗೆ ಮಾಹಿತಿ ನೀಡಿದ್ದರು. ಈ ವಿಚಾರ ತಿಳಿದ ಕೂಡಲೇ ಭೈರತಿ ಸುರೇಶ್ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಅದೇ ದಾಖಲೆಗಳನ್ನ ಬಿಡುಗಡೆ ಮಾಡಿದ್ದರು. ಸಚಿವರು ದಾಖಲೆಗಳನ್ನ ತೆಗೆದುಕೊಂಡು ಹೋಗಲು ಲೋಕಾಯುಕ್ತ ಎಸ್ಪಿ ಸಹಕರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೊಹಿಯುದ್ದೀನ್ ಬಾವ ಸೋದರ ನಾಪತ್ತೆ ಪ್ರಕರಣ - ಕಾರು ಪತ್ತೆ
ಮಂಗಳೂರು, ಅ. ೬: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಸೋದರ ಮುಮ್ತಾಜ್ ಅಲಿಯ ಕಾರು ಕೂಳೂರು ಸೇತುವೆ ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಮುಮ್ತಾಜ್ ನಾಪತ್ತೆಯಾಗಿದ್ದು, ಅವರು ನದಿಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಹೀಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕೂಳೂರು ನದಿಯ ಸೇತುವೆ ಬಳಿ ಕಪ್ಪು ಬಣ್ಣದ ಬಿಎಂಡಬ್ಲ್ಯು ಕಾರು ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅದು ಮುಮ್ತಾಜ್ ಅಲಿ ಅವರದ್ದು ಎಂದು ಗೊತ್ತಾಗಿದೆ. ಅವರಿಗಾಗಿ ಅಗ್ನಿಶಾಮಕ ಮತ್ತು ತುರ್ತು ಸೇವಾ ತಂಡದವರು ಹಾಗೂ ನಮ್ಮ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಪಣಂಬೂರು ಠಾಣೆ ಪೊಲೀಸರು ತಿಳಿಸಿದ್ದಾರೆ. ಕಾರು ಸೇತುವೆಯ ಮಧ್ಯಭಾಗದಲ್ಲಿ ನಿಂತಿದೆ. ವಾಹನ ಸಂಚಾರಕ್ಕೆ ಅಡಚಣೆಯಾಗಬಾರದೆಂದು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಅಪಘಾತಕ್ಕೆ ಈಡಾಗಿದೆ ಎನ್ನಬಹುದು. ಮಂಗಳೂರು ಉತ್ತರ ಭಾಗದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಮ್ತಾಜ್ ಅಲಿ ಅವರು ಇಂದು ನಸುಕಿನ ಜಾವ ೩ ಗಂಟೆಗೆ ಮನೆಯಿಂದ ಹೊರಟಿದ್ದರು. ೫ ಗಂಟೆ ವೇಳೆಗೆ ಕೂಳೂರು ಸೇತುವೆ ಬಳಿ ಕಾರು ಮಾತ್ರ ಪತ್ತೆಯಾಗಿದೆ.
ದ್ವಿಪಕ್ಷೀಯ ಮಾತುಕತೆಗೆ ಭಾರತಕ್ಕೆ ಬಂದ ಮಾಲ್ಡೀವ್ಸ್ ಅಧ್ಯಕ್ಷ
ನವದೆಹಲಿ, ಅ. ೬: ದ್ವಿಪಕ್ಷೀಯ ಸಂಬAಧ ವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಇಂದು ಭಾನುವಾರ ದೆಹಲಿಗೆ ಆಗಮಿಸಿದ್ದಾರೆ. ಪತ್ನಿ ಸಜೀದಾ ಮೊಹಮ್ಮದ್ ಅವರೊಂದಿಗೆ ದೆಹಲಿಗೆ ಆಗಮಿಸಿದ ಮುಯಿಝು ಅವರನ್ನು ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ಸ್ವಾಗತಿಸಿದರು. ಅಕ್ಟೋಬರ್ ೬ ರಿಂದ ೧೦ ರವರೆಗಿನ ಭಾರತ ಭೇಟಿ ವೇಳೆ ಮುಯಿಝು ಅವರು ರಾಷ್ಟçಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ದ್ವಿಪಕ್ಷೀಯ ಸಂಬAಧ, ಪ್ರಾದೇಶಿಕ ಮತ್ತು ಅಂತರರಾಷ್ಟಿçÃಯ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮೂಡಾ ಬಳಿಕ ಬುಡಾ ಹಗರಣ ಆರೋಪ
ಬಳ್ಳಾರಿ, ಅ. ೬: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮೂಡಾ) ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇದರ ನಡುವಲ್ಲೇ ಬಳ್ಳಾರಿಯಲ್ಲಿ ಬುಡಾ ಹಗರಣ ಬೆಳಕಿಗೆ ಬಂದಿದೆ. ಉಪ ಮುಖ್ಯಮಂತ್ರಿ ಡಿ.P.ೆ ಶಿವಕುಮಾರ್ ಆಪ್ತ, ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗ ಮಾಡಿ ಅಕ್ರಮ ಎಸೆಗಿದ್ದಾರೆ ಎಂದು ಸ್ವಪಕ್ಷೀಯ ಕಾಂಗ್ರೆಸ್ ಶಾಸಕರೇ ಪತ್ರ ಬರೆದಿರುವುದು ತೀವ್ರ ಸಂಚಲನ ಸೃಷ್ಟಿಸಿದೆ. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್ ಆಂಜನೇಯಲು ಅವರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಅಕ್ರಮ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಲೇಔಟ್ ನಿರ್ಮಾಣ, ಅನುಮತಿ ಮತ್ತು ಹಂಚಿಕೆ ಸಂಬAಧ ಮಾರ್ಚ್ ೭ ಮತ್ತು ಜುಲೈ ೮ನೇ ತಾರೀಖು ನಡೆದ ಸಭೆಯ ನಡಾವಳಿಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು, ಆ ಮೂಲಕ ಭ್ರಷ್ಟಾಚಾರ ಮಾಡಲಾಗಿದೆ ಎಂದು ಆರೋಪಿಸಿ ಜೆ.ಎಸ್. ಆಂಜಿನೇಯಲು ವಿರುದ್ಧ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.