ಸುಂಟಿಕೊಪ್ಪ, ಅ. ೬: ಯಾವುದೇ ರೀತಿಯ ಸಭೆ ಸಮಾರಂಭಗಳನ್ನು ಆಯೋಜಿಸು ವಾಗ ವೇದಿಕೆಗೆ ತನ್ನದೆಯಾದ ಶಿಸ್ತು ಘನತೆಯಿದ್ದು ಅದರ ಬಗ್ಗೆ ಅರಿತು ಕಾರ್ಯಕ್ರಮ ಆಯೋಜಿಸಿದ್ದಲ್ಲಿ ಮಾತ್ರ ಕಾರ್ಯಕ್ರಮವು ಯಶಸ್ವಿಗೊಳ್ಳಲಿದೆ ಎಂದು ಲೆಕ್ಕ ಪರಿಶೋದಕ ಪಿ.ಡಬ್ಲುö್ಯ. ಫ್ರಾನ್ಸಿಸ್ ಹೇಳಿದರು.
ಮಾದಾಪುರ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವತಿಯಿಂದ ಸುಂಟಿಕೊಪ್ಪ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಆಯೋಜಿಸಿದ್ದ ‘ಭಾಷಣ ಕಲೆ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಭೆಗಳಿಗೆ ವೇದಿಕೆಯನ್ನು ಸಿದ್ಧಪಡಿಸುವಾಗ ಅಧ್ಯಕ್ಷರು ಮತ್ತು ಅತಿಥಿಗಳಿಗೆ ಸೂಕ್ತ ರೀತಿಯಲ್ಲಿ ಆಸನಗಳನ್ನು ಸಿದ್ಧಪಡಿಸುವು ದರೊಂದಿಗೆ ಅತಿಥಿಗಳು ಆಸೀನರಾಗುವಂತೆ ನೋಡಿ ಕೊಳ್ಳುವುದು ಕಾರ್ಯಕ್ರಮದ ಆಯೋಜಕರು ನಿರ್ವಹಿಸಬೇಕಾದ ಆದ್ಯ ಕರ್ತವ್ಯವಾಗಿದೆ ಇದರಿಂದ ಸಮಾರಂಭವು ಯಶಸ್ವಿಗೊಳ್ಳುತ್ತದೆ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಫ್. ಸಬಾಸ್ಟೀನ್ ಮಾತನಾಡಿ, ಭಾಷಣ ಕಲೆಯನ್ನು ಕರಗತ ಮಾಡಿಕೊಂಡು ಧೈರ್ಯದಿಂದ ಮುಂದುವರಿಯ ಬೇಕು.
ನಮ್ಮೊಳಗಿರುವ ಕೀಳರಿಮೆ ತೊಡೆದು ಹಾಕಬೇಕು ಎಂದರು. ಮತ್ತೋರ್ವ ಮುಖ್ಯ ಅತಿಥಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ.ಎಸ್. ಸದಾಶಿವ ರೈ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮಾದಾಪುರ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮೋಹನ್ ಹೆಗ್ಡೆ ವಹಿಸಿದ್ದರು.
ವೇದಿಕೆಯಲ್ಲಿ ಮಾದಾಪುರ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಪ್ರಫುಲ್ಲ ಕುಮಾರಿ, ಮಾದಾಪುರ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ರಾ.ಸೇ. ಯೋಜನೆ ಘಟಕ ಶಿಬಿರಾಧಿಕಾರಿ ಎನ್.ಎನ್. ಮನೋಹರ್ ಉಪಸ್ಥಿತರಿದ್ದರು.