ಕೂಡಿಗೆ, ಅ. ೬: ಶಿರಂಗಾಲ ಗ್ರಾಮ ಪಂಚಾಯಿತಿಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾಬಾಯಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಭಾಗವಹಿಸಿ ಸರಕಾರದ ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಬಸವರಾಜ್, ಸದಸ್ಯರುಗಳಾದ ಪ್ರತೀಪ್, ಶ್ರೀಕಾಂತ್, ಸರಿತಾ, ಲಕ್ಷಮ್ಮ, ಭಾಗೀರತಿ, ತಾಲೂಕು ಲೆಕ್ಕ ಪರಿಶೋಧನಾ ಅಧಿಕಾರಿ ಮಹದೇವ, ಪ್ರಸಾದ್, ವಿಕ್ರಂ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಲತಾ, ಕಾರ್ಯದರ್ಶಿ ಕೆ.ಸಿ. ರವಿ ಉಪಸ್ಥಿತರಿದ್ದರು.

ಕಳೆದ ಸಾಲಿನಲ್ಲಿ ಕೈಗೊಂಡ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳಿಗೆ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು. ಕೆ.ಸಿ. ರವಿ ಸ್ವಾಗತಿಸಿ. ವಂದಿಸಿದರು.