ಮಡಿಕೇರಿ, ಅ. ೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ ೨೦೨೪-೨೫ ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.
ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ [ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ] ಹಾಗು ಸ್ನಾತಕೋತ್ತರ ಪಿ.ಜಿ. ಕೋರ್ಸ್ಗಳಾದ [ಎಂ.ಎ, ಎಂ.ಎ-ಪತ್ರಿಕೋದ್ಯಮ, ಎಂ.ಕಾA, ಎಂ.ಬಿ.ಎ, ಎಂ.ಲಿಬ್‌ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲೂ] [ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್] ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.
ಪ್ರವೇಶಾತಿಗೆ ಅಗತ್ಯ ದಾಖಲೆಗಳು ಕಡ್ಡಾಯವಾಗಿದೆ. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಜೆರಾಕ್ಸ್ ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ ಜೆರಾಕ್ಸ್. ಪದವಿ ಅಂಕಪಟ್ಟಿ ಜೆರಾಕ್ಸ್ (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್ಗಳು), ಆಧಾರ್ ಕಾರ್ಡ್ ಜೆರಾಕ್ಸ್. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ ಹೆಸರು, IಈSಅ ಕೋಡ್. ನಾಲ್ಕು ಫೋಟೋಗಳು. ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್, ಫೋನ್ ಪೇ, ಗೂಗಲ್ ಪೇ, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು.
ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. ೯೮೪೪೩೯೫೯೮೬, ೮೨೯೬೨೧೫೭೧೪, ೯೪೮೩೫೭೦೯೦೦, ೭೪೧೧೨೩೩೦೦೭ ಈ ದೂರವಾಣಿಯ ಮುಖಾಂತರ ವಿವರ ಪಡೆಯಬಹುದಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ೨೦೨೪-೨೫ ಜುಲೈ ಆವೃತ್ತಿಯ ಪ್ರವೇಶಾತಿಯನ್ನು ಎಲ್ಲಾ ಸರ್ಕಾರಿ ರಜೆ ದಿನದಂದು ಹಾಗೂ ಎಲ್ಲಾ ಶನಿವಾರ ಮತ್ತು ಭಾನುವಾರದಂದು ಪ್ರವೇಶಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.