ಕಣಿವೆ, ಅ. ೬: ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ತಾಲೂಕು ಆರೋಗ್ಯ ಇಲಾಖೆ ಹಾಗೂ ಶಿರಂಗಾಲ ಗ್ರಾ.ಪಂ. ವತಿಯಿಂದ ಕುಶಾಲನಗರ ತಾಲೂಕಿನ ಶಿರಂಗಾಲದಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯಾಧಿಕಾರಿ ಡಾ. ಸತೀಶ್ ಕುಮಾರ್ ಮಾತನಾಡಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಜನರು ತಮ್ಮ ವಾಸ ಸ್ಥಳಗಳ ಆಸುಪಾಸಿನಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವ ಮೂಲಕ ಮಾರಕ ಡೆಂಗ್ಯೂ ಹಾಗೂ ಸಾಂಕ್ರಾಮಿಕ ರೋಗಗಳಿಂದ ದೂರವಿರಬೇಕು ಎಂದರು.

ಈ ಸಂದರ್ಭ ಜಿಲ್ಲಾ ಶಸ್ತç ಚಿಕಿತ್ಸಕ ಡಾ. ನಂಜುAಡಯ್ಯ ಮಾತನಾಡಿ, ಸಾರ್ವಜನಿಕರು ಆರೋಗ್ಯದತ್ತ ಹೆಚ್ಚಿನ ನಿಗಾವಹಿಸುವ ದಿಸೆಯಿಂದ ಆರೋಗ್ಯ ಇಲಾಖೆ ಹಳ್ಳಿಗಳ ಜನರತ್ತ ಧಾವಿಸಿ ಬಂದು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಸಿಗುವ ಆರೋಗ್ಯ ಸೇವೆಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರೆಕೊಟ್ಟರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಸಮುದಾಯ ಔಷಧ ವಿಭಾಗದ ಮುಖ್ಯಸ್ಥ ಡಾ. ರಾಮಚಂದ್ರ ಕಾಮತ್, ಮಕ್ಕಳ ಹಿರಿಯ ಚಿಕಿತ್ಸಕ ಡಾ. ರವಿಚಂದ್ರ, ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಝ್ಮಾ ಫಾತಿಮ ಜಾಫರ್, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಹೆಚ್.ಕೆ. ಶಾಂತಿ, ತಾಲೂಕು ಆರೋಗ್ಯ ನಿರೀಕ್ಷಕ ವಿಶ್ವಜ್ಞ, ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಬಾಯಿ, ಆರೋಗ್ಯ ರಕ್ಷಾ ಸಮಿತಿಯ ಚಂದ್ರಶೇಖರ್ ಸೇರಿದಂತೆ ಮಡಿಕೇರಿ ಮೆಡಿಕಲ್ ಕಾಲೇಜಿನ ವೈದ್ಯ ಸಿಬ್ಬಂದಿಗಳಿದ್ದರು.