ಸುಂಟಿಕೊಪ್ಪ, ಅ. ೬: ಸ್ವಚ್ಛತೆಗೆ ಆದ್ಯತೆ ನೀಡುವ ಸರ್ವ ಪ್ರಯತ್ನ ಆಗಬೇಕೆಂದು ಸುಂಟಿಕೊಪ್ಪ ಲಯನ್ಸ್ ಕ್ಲಬ್ ಅಧ್ಯಕ್ಷ ಶಶಾಂಕ್ ಅವರು ಕರೆ ನೀಡಿದ್ದಾರೆ. ಮಾದಾಪುರ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನ ವತಿಯಿಂದ ಸುಂಟಿಕೊಪ್ಪ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಮಾತನಾಡಿದ ಅವರು ಸ್ವಚ್ಛತೆಯ ಬಗ್ಗೆ ಎಷ್ಟೇ ಮಾತನಾಡಿದರೂ ಕೃತಿಯಲ್ಲಿ ಎಷ್ಟರಮಟ್ಟಿಗೆ ಯಶಸ್ವಿಗೊಂಡಿದ್ದೇವೆ ಎಂಬುದನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಮಹಾತ್ಮ ಗಾಂಧಿ ಜಯಂತಿಯ ವಿಶೇಷ ದಿನದಂದು ವiಹಾತ್ಮ ಗಾಂಧೀಜಿ ಅವರಿಗೆ ಪ್ರಿಯವಾಗಿದ್ದ ಸ್ವಚ್ಛತೆ ಮತ್ತು ನೈರ್ಮಲ್ಯದ ನಾವು ಯುವಜನಾಂಗದಲ್ಲಿ ವಿಶೇಷವಾಗಿ ವಿದ್ಯಾರ್ಥಿ ಸಮೂಹದಲ್ಲಿ ಅರಿವು ಉಂಟುಮಾಡಬೇಕೆAದು ಹೇಳಿದರು.
ಪತ್ರಕರ್ತ ಎಂ.ಬಿ. ವಿನ್ಸೆಂಟ್ ಮಾತನಾಡಿ, ಅಂತರAಗ ಮತ್ತು ಬಹಿರಂಗದಲ್ಲಿ ನಾವು ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜನಜಾಗೃತಿ ಉಂಟು ಮಾಡಬೇಕು. ನಮ್ಮಿಂದಾಗುವ ತಪ್ಪುಗಳನ್ನು ನಾವು ತಿಳಿದುಕೊಂಡಾಗ ಅಥವಾ ಇತರರು ತೋರಿಸಿಕೊಟ್ಟಾಗ ಅವುಗಳನ್ನು ತಿದ್ದಿಕೊಂಡು ಮುಂದುವರಿಯುವುದು ಕೂಡ ನಮ್ಮ ಜೀವನದ ಸ್ವಚ್ಛತೆ ಮತ್ತು ನೈರ್ಮಲ್ಯತೆಯ ಭಾಗವಾಗಿರಲೆಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಸುಂಟಿಕೊಪ್ಪ ಲಯನ್ಸ್ ಕ್ಲಬ್ ಕಾರ್ಯದರ್ಶಿ ಗ್ಲೇನ್ ಮೆನೇಜೆಸ್, ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಣಿ ಮುಖೇಶ್, ಸುಂಟಿಕೊಪ್ಪ ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾಗೇಶ್ ಪೂಜಾರಿ, ರಾಷ್ಟಿçÃಯ ಸೇವಾ ಯೋಜನೆ ಘಟಕದ ಶಿಬಿರಾಧಿಕಾರಿ ಮನೋಹರ್ ಎನ್.ಎನ್. ಉಪಸ್ಥಿತರಿದ್ದರು.