ಕಣಿವೆ, ಅ. ೭: ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ದುಬಾರೆ ಕಾವೇರಿ ದಂಡೆಯ ಸಾಕಾನೆ ಶಿಬಿರ ಪ್ರವೇಶಕ್ಕೆ ತಾ. ೮ ರಂದು (ಇಂದು) ಅವಕಾಶ ಕಲ್ಪಿಸಲಾಗಿದೆ.
ದಸರಾ ರಜೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಆಗಮಿಸುವುದರಿಂದಾಗಿ ಪ್ರವಾಸಿಗರ ಹಿತದೃಷ್ಟಿಯಿಂದ ತಾ. ೮ ರಂದು (ಇಂದು) ಸಾಕಾನೆ ಶಿಬಿರವನ್ನು ತೆರೆಯಲಾಗುವುದು ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ ಬಳಿಯ ಹಾರಂಗಿಯಲ್ಲಿ ಸಾಕಾನೆ ಶಿಬಿರ ಆರಂಭಿಸಿದ ಹಿನ್ನೆಲೆ ದುಬಾರೆಯ ಸಾಕಾನೆ ಶಿಬಿರದಲ್ಲಿ ಜನರ ಪ್ರವೇಶ ನಿರ್ಬಂಧಿಸಲಾಗಿತ್ತು.