ಕೂಡಿಗೆ, ಅ. ೭: ಕುಶಾಲನಗರದ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ೨೦೨೩-೨೪ನೇ ಸಾಲಿನ ವಾರ್ಷಿಕ ಮಹಾಸಭೆ ತಾ. ೮ ರಂದು (ಇಂದು) ೧೦ ಗಂಟೆಗೆ ಕುಶಾಲನಗರದ ಕೊಡವ ಸಮಾಜದಲ್ಲಿ ಸಂಘದ ಅಧ್ಯಕ್ಷ ಸಿ.ಸಿ. ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಮಡಿಕೇರಿ ಸಂಘದ ಅಧ್ಯಕ್ಷ ಬಿ.ಬಿ. ಮಾದಮಯ್ಯ, ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ ಜಿ. ಗೌರಯ್ಯ, ಸಂಘದ ಸಲಹೆಗಾರರಾದ ಎಂ.ಹೆಚ್. ನಜೀರ್ ಅಹಮ್ಮದ್ ಆಗಮಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಎಂ. ಆಬ್ರಹಾಂ ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.