ಕುಶಾಲನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ಅನುಗ್ರಹ ಪಿಯು ಮತ್ತು ಪದವಿ ಕಾಲೇಜು ಆಶ್ರಯದಲ್ಲಿ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಲಿಂಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ ಸದಸ್ಯರಾದ ಎಂ.ಎನ್. ಚಂದ್ರಮೋಹನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ತಮ್ಮ ದೇಹದ ಆರೋಗ್ಯದೊಂದಿಗೆ ಉತ್ತಮ ಸಮಾಜದ ಆರೋಗ್ಯ ಕಾಪಾಡುವಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪೊಲೀಸ್ ಇಲಾಖೆ ಹೆಡ್ ಕಾನ್ಸ್ಟೇಬಲ್ ಆಶಾ ಅವರು ಪಾಲ್ಗೊಂಡು, ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವ ಪೀಳಿಗೆಯ ಪಾತ್ರ ಪ್ರಮುಖ. ವಿದ್ಯಾರ್ಥಿಗಳು ಸಮಾಜದ ಮುಖ್ಯವಾಹಿನಿಗೆ ಸೇರುವುದ ರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ನಿಯಮ ಬಾಹಿರ ಅಥವಾ ಕಾನೂನುಬಾಹಿರವಾಗಿ ಯಾವುದೇ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಾರದು. ಗುರು ಹಿರಿಯರಿಗೆ ಗೌರವ ನೀಡಬೇಕು. ಮಾದಕ ವಸ್ತುಗಳ ದಾಸರಾಗ ಬಾರದು. ವಾಹನಗಳಲ್ಲಿ ತೆರಳುವ ಸಂದರ್ಭ ಕಟ್ಟುನಿಟ್ಟಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದಲ್ಲಿ ಅನಾಹುತಗಳು ಉಂಟಾಗುತ್ತವೆ ಮತ್ತು ಕಾನೂನು ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದರು. ವಿದ್ಯಾರ್ಥಿಗಳೊಂದಿಗೆ ಸ್ವಾಸ್ಥö್ಯ ಸಂಕಲ್ಪದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.
ಒಕ್ಕೂಟದ ಅಧ್ಯಕ್ಷೆ ಲಲಿತಾ, ಜಯಲಕ್ಷಿö್ಮ, ಕುಶಾಲನಗರ ವಲಯ ಮೇಲ್ವಿಚಾರಕರಾದ ಪೂರ್ಣಿಮಾ ಇದ್ದರು.
ಕುಶಾಲನಗರ ಮೂಕಾಂಬಿಕಾ ವಿದ್ಯಾಸಂಸ್ಥೆ
ಕುಶಾಲನಗರ: ಯುವ ಪೀಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣದ ಕನಸು ನನಸಾಗಿಸ ಬೇಕಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಸದಸ್ಯರಾದ ಎಂ.ಎನ್. ಚಂದ್ರಮೋಹನ್ ಕರೆ ನೀಡಿದರು.
ಕುಶಾಲನಗರ ಮೂಕಾಂಬಿಕಾ ವಿದ್ಯಾಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುಡ್ಡೆಹೊಸೂರು ವಲಯ ಮತ್ತು ವಿದ್ಯಾಸಂಸ್ಥೆ ಸಹಯೋಗದೊಂದಿಗೆ ನಡೆದ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು. ಪ್ರತಿಯೊಬ್ಬರು ಸಮಾಜದಲ್ಲಿ ಇತರರಿಗೆ ಮಾರ್ಗದರ್ಶನ ನೀಡುವಂತಹ ಪ್ರಜೆಗಳಾಗಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸೂದನ ಗೋಪಾಲ್ ಅವರು ಮಾತನಾಡಿ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ನಿರಂತರ ಚಟುವಟಿಕೆಗಳು ಕಾರ್ಯಕ್ರಮಗಳ ಮೂಲಕ ಮಾತ್ರ ಸ್ವಾಸ್ಥ್ಯ ಸಮಾಜ ಕಾಣಲು ಸಾಧ್ಯ ಎಂದರು.
ಈ ಸಂದರ್ಭ ಗುಡ್ಡೆಹೊಸೂರು ವಲಯದ ಮೇಲ್ವಿಚಾರಕರಾದ ಸತೀಶ್, ಮುಳ್ಳುಸೋಗೆ ವ್ಯಾಪ್ತಿಯ ಒಕ್ಕೂಟದ ಅಧ್ಯಕ್ಷೆ ವನಿತ, ಸೇವಾ ಪ್ರತಿನಿಧಿಗಳಾದ ಸುವರ್ಣ, ಶಶಿಕಲಾ ಮತ್ತು ಪ್ರೌಢಶಾಲೆ ಹಾಗೂ ಕಾಲೇಜು ಬೋಧಕರಾದ ಕಾಂತರಾಜು, ಚಂದ್ರಶೇಖರ್, ಹೇಮಂತ್ ಕುಮಾರ್, ಡಿ.ಕೆ. ಸುರೇಶ್, ನಗಿನ ಬಾನು, ಸ್ಮಿತಾ ಡಿಸೋಜಾ, ಧನಲಕ್ಷಿö್ಮ ಮತ್ತಿತರರು ಇದ್ದರು.ಐಗೂರು ಅಂಗನವಾಡಿ ಕೇಂದ್ರ
ಐಗೂರು: ಬಾಣಂತಿ ಮಹಿಳೆ ಯರು ಪೌಷ್ಟಿಕಾಂಶ ಆಹಾರಗಳನ್ನು ಸೇವಿಸಬೇಕೆಂದು ನಿವೃತ್ತ ಉಪಾಧ್ಯಾಯ ಮೇದಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಐಗೂರಿನ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತ ನಾಡಿದರು. ಸಭೆಯಲ್ಲಿ ಭಾಗವಹಿಸಿದ್ದ ಐಗೂರು ಗ್ರಾಮ ಪಂ. ಪಿಡಿಓ ಪೂರ್ಣಕುಮಾರ್ ಅÀವರು ಮಾತನಾಡಿ ಬಾಣಂತಿ ಮಹಿಳೆಯರು ವೈದ್ಯರ ಸಲಹೆ ಮತ್ತು ಸೂಚನೆಯನ್ನು ಸರಿಯಾಗಿ ಪಾಲಿಸಬೇಕೆಂದರು. ಈ ಕಾರ್ಯ ಕ್ರಮದಲ್ಲಿ ಐಗೂರು ಗ್ರಾ.ಪಂ. ಪಿಡಿಓ ಪೂರ್ಣ ಕುಮಾರ್, ನಿವೃತ್ತ ಶಿಕ್ಷಕರಾದ ಕೆ. ಟಿ. ಮೇದಪ್ಪ, ಅಂಗನವಾಡಿ ಕಾರ್ಯಕರ್ತೆಯ ರಾದ ರಾಧಾಮಣಿ, ಪ್ರಮೀಳಾ, ಗೀತಾ ಮತ್ತು ಆಶಾ ಕಾರ್ಯ ಕರ್ತೆಯರು ಭಾಗವಹಿಸಿದ್ದರು.