ಮಡಿಕೇರಿ, ಅ. ೭: ದಸರಾ ಪ್ರಯುಕ್ತ ಮಡಿಕೇರಿ ದಸರಾ ಕ್ರೀಡಾ ಸಮಿತಿ ವತಿಯಿಂದ ಮಡಿಕೇರಿ ಜ. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಮುಕ್ತ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಟೀಮ್ ಭಗವತಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ರನ್ನರ್ಸ್ ಪ್ರಶಸ್ತಿಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಪಡೆದುಕೊಂಡಿತು.
ರೋಚಕ ಹಣಾಹಣಿಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಟೀಮ್ ಭಗವತಿ ತಂಡವು ೩-೦ ಗೋಲುಗಳ ಅಂತರದಿAದ ಗೆಲುವು ಸಾಧಿಸಿತು. ಇದಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್ ಪಂದ್ಯವು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಎಸ್.ಕೆ.ಆರ್.ವಿ. ತಂಡಗಳ ನಡುವೆ ನಡೆಯಿತು. ಎಫ್.ಎಂ.ಸಿ.ಸಿ. ತಂಡವು ೨-೦ ಗೋಲುಗಳ ಅಂತರದಿAದ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತು. ಎರಡನೇ ಸೆಮಿಫೈನಲ್ ಪಂದ್ಯವು ಟೀಮ್ ಭಗವತಿ ಹಾಗೂ ಎಂ.ಸಿ.ಸಿ. ಮಡಿಕೇರಿ ತಂಡಗಳ ನಡುವೆ ನಡೆಯಿತು. ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಎರಡು ತಂಡಗಳು ನಿಗದಿತ ಸಮಯದಲ್ಲಿ ಯಾವುದೇ ಗೋಲು ಬಾರಿಸದೆ ಸಮಬಲ ಸಾಧಿಸಿತು.
ಅಂತಿಮವಾಗಿ ಪೆನಾಲ್ಟಿ ಶೂಟೌಟ್‌ನಲ್ಲಿ ಟೀಮ್ ಭಗವತಿ ತಂಡವು ೩-೨ ಗೋಲುಗಳ ಅಂತರದಿAದ ಗೆದ್ದು ಫೈನಲ್ ಪ್ರವೇಶಿಸಿತು. ಫುಟ್ಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ತಂಡಕ್ಕೆ ರೂ. ೧೫ ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಯಿತು.
ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ೧೦ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಯಿತು. ಪಂದ್ಯಾವಳಿಯಲ್ಲಿ ಒಟ್ಟು ೨೨ ತಂಡಗಳು ಭಾಗವಹಿದ್ದವು. ಫುಟ್ಬಾಲ್ ಪಂದ್ಯಾವಳಿಯ ತೀರ್ಪುಗಾರರಾಗಿ ರಾಜ್ಯ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರ ಇಸ್ಮಾಯಿಲ್ ಕಂಡಕರೆ ಹಾಗೂ ಸವಾದ್ ಉಸ್ಮಾನ್ ಕಂಡಕರೆ ಕಾರ್ಯನಿರ್ವಹಿಸಿದರು.