ಮಡಿಕೇರಿ, ಅ. ೭: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೯ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.