ಮಡಿಕೇರಿ, ಅ. ೮ : ಮಡಿಕೇರಿ ದಸರಾ ಪ್ರಯುಕ್ತ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿಯಿಂದ ತಾ. ೯ರಂದು (ಇಂದು) ಬೆಳಿಗ್ಗೆ ೧೦ಗಂಟೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ಬೆಳಿಗ್ಗೆ ೯ ಗಂಟೆಗೆ ಗಾಂಧಿ ಮೈದಾನ ರಸ್ತೆಯಲ್ಲಿಯಲ್ಲಿರುವ ರಾಷ್ಟç ಕವಿ ಕುವೆಂಪು ಪುತ್ಥಳಿಗೆ ಕವಿಗೋಷ್ಠಿ ಅಧ್ಯಕ್ಷೆ - ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾಲಾರ್ಪಣೆ ಮಾಡಲಿದ್ದಾರೆ.
ಬಳಿಕ ೧೦ ಗಂಟೆಗೆ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಉಜ್ವಲ್ ರಂಜಿತ್ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸೋಮವಾರಪೇಟೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷರು, ಉದ್ಯಮಿ ಅರುಣ್ ಕೊತ್ನಳಿ ನೆರವೇರಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಕೊಡಗು ಜಿಲ್ಲಾಧಿಕಾರಿ, ದಸರಾ ಸಮಿತಿ ಅಧ್ಯಕ್ಷರಾದ ವೆಂಕಟ್ರಾಜಾ ಉಪಸ್ಥಿತರಿರಲಿದ್ದು, ವಿಶೇಷ ಅತಿಥಿಯಾಗಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಎಂ. ಆರ್. ಚರಣ್ ರಾಜ್ ಪಾಲ್ಗೊಳ್ಳಲಿದ್ದಾರೆ.
ಸುಮಾರು ೨೨೦ಕ್ಕಿಂತಲೂ ಹೆಚ್ಚಿನ ಕವನಗಳು ಈ ಬಾರಿ ಕವಿಗೋಷ್ಠಿಗೆ ಬಂದಿದ್ದು ಅದರಲ್ಲಿ ೬೩ ಕವನಗಳನ್ನು ಆಯ್ಕೆ ಮಾಡಿ ಪ್ರಕಟಿಸಿರುವ ಕವನ ಸಂಕಲವನ್ನು ಇದೇ ಸಂದರ್ಭ ಬಿಡುಗಡೆ ಮಾಡಲಾಗುತ್ತದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಲೇಖಕಿ ಕಟ್ರತನ ಲಲಿತ ಅಯ್ಯಣ್ಣ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್, ಮಡಿಕೇರಿ ನಗರ ದಸರಾ ಸಮಿತಿ ಕಾರ್ಯಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಾಜಾಂಚಿ ಅರುಣ್ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಭಾಗವಹಿಸಲಿದ್ದಾರೆ. ಕವಿಗೋಷ್ಠಿಯ ಸಮಾರೋಪ ಸಮಾರಂಭ ಸಂಜೆ ೪ ಗಂಟೆಗೆ ನಡೆಯಲಿದ್ದು. ಮುಖ್ಯ ಅತಿಥಿಗಳಾಗಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಪಾಲ್ಗೊಳ್ಳಲಿದ್ದಾರೆ.