ಹನಿಟ್ರಾö್ಯಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ: ಸಂತ್ರಸ್ತೆ ಹೇಳಿಕೆ

ಬೆಂಗಳೂರು, ಅ. ೯: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರಾö್ಯಪ್ ಮಾಡಿದ್ದಾರೆ. ನನಗೆ ಸರ್ಕಾರದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬAಧಿತ ವೀಡಿಯೋವನ್ನು ಕೊಡುವುದಾಗಿ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು ಹೇಳಲಾದ ಸಂತ್ರಸ್ತ ಮಹಿಳೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂತ್ರಸ್ತ ಮಹಿಳೆ ಅವರು, ಮಾಜಿ ಸಿಎಂ ಇಬ್ಬರಿಗೆ ಹನಿಟ್ರಾö್ಯಪ್ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೇಳಿದ್ದಾರೆ. ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸಡ್ ಕ್ಯಾಮೆರಾಗಳಿವೆ. ನಮ್ಮಂತಹವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಮಾಜಿ ಸಿಎಂ, ಶಾಸಕರು ಹನಿಟ್ರ‍್ಯಾಪ್ ವೀಡಿಯೋ ಮಾಡಿಸಿದ್ದಾರೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹನಿಟ್ರ‍್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ಅಧಿಕಾರಿಗಳನ್ನು ಹನಿಟ್ರ‍್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಬ್ರೆöÊನ್ ಮ್ಯಾಪಿಂಗ್ ಮಾಡಿಸಲಿ ಎಂದು ಅಶ್ವತ್ಥ ನಾರಾಯಣ, ಅಶೋಕ್‌ಗೆ ಸಂತ್ರಸ್ತೆ ಸವಾಲೆಸೆದಿದ್ದಾರೆ.

ಬಿ. ನಾಗೇಂದ್ರ ಹಗರಣದ ಮಾಸ್ಟರ್‌ಮೈಂಡ್-ಇ.ಡಿ.

ನವದೆಹಲಿ, ಅ. ೯: ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅವರು ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಮಾಸ್ಟರ್‌ಮೈಂಡ್ ಆಗಿದ್ದು, ಈ ಹಿಂದೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗೆ ರಾಜ್ಯ ಸರ್ಕಾರದ ಸಂಸ್ಥೆಯಿAದ ಬೇರೆಡೆಗೆ ವರ್ಗಾಯಿಸಲಾದ ಹಣವನ್ನು ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಹೇಳಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಕೆಲವು ದಿನಗಳ ಹಿಂದೆ ಕೇಂದ್ರ ತನಿಖಾ ಸಂಸ್ಥೆಯೂ ಪ್ರಾಸಿಕ್ಯೂಷನ್ ದೂರು ಅಥವಾ ಚಾರ್ಜ್ಶೀಟ್ ಅನ್ನು ಬೆಂಗಳೂರಿನ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿAಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ತಿಳಿಸಿದೆ. ನ್ಯಾಯಾಲಯವು ಚಾರ್ಜ್ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಇಡಿ ಹೇಳಿದೆ. ಸತ್ಯನಾರಾಯಣ ವರ್ಮ, ಏಟಕಾರಿ ಸತ್ಯನಾರಾಯಣ, ಜೆ.ಜಿ.ಪದ್ಮನಾಭ, ನಾಗೇಶ್ವರ್ ರಾವ್, ನೆಕ್ಕೆಂಟಿ ನಾಗರಾಜ್ ಮತ್ತು ವಿಜಯ್ ಕುಮಾರ್ ಗೌಡ ಅವರಂತಹ ಪ್ರಮುಖ ಸಹಚರರು ಸೇರಿದಂತೆ ೨೪ ಮಂದಿಯ ಸಹಾಯದಿಂದ ಈ ಹಗರಣ ನಡೆದಿದ್ದು, ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಪ್ರಾಥಮಿಕ ಆರೋಪಿ ಮತ್ತು ಮಾಸ್ಟರ್‌ಮೈಂಡ್ ಎಂದು ಹೆಸರಿಸಿರುವುದಾಗಿ ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಲಕಿ ಮೇಲೆ ಅತ್ಯಾಚಾರ - ಎಸ್.ಐ.ಟಿ. ರಚನೆ

ಕೋಲ್ಕತ್ತ ಅ. ೯: ದಕ್ಷಿಣ ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ೧೦ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ನಡೆಸಿದ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ವಿಶೇಷ ತನಿಖಾ ದಳವನ್ನು (ಎಸ್‌ಐಟಿ) ರಚಿಸಿದೆ. ಬಾರುಯೀಪುರದ ಪೊಲೀಸ್ ವರಿಷ್ಠಾಧಿಕಾರಿ ಚಂದ್ರ ಢಾಲಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ಈ ಪ್ರಕರಣದಲ್ಲಿ ನ್ಯಾಯ ಒದಗಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ನಮ್ಮ ಬದ್ಧತೆ ಎಂದು ಸ್ಥಳೀಯರಿಗೆ ಖಚಿತಪಡಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿ ಈವರೆಗೆ ಒಬ್ಬರನ್ನು ಬಂಧಿಸಲಾಗಿದೆ. ಘಟನೆಗೆ ರಾಜ್ಯದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ, ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ಇತ್ತೀಚೆಗೆ ಆಕ್ರೋಶ ಹೊರಹಾಕಿದ್ದರು.

ಕಾಂಗ್ರೆಸ್ ವಿರುದ್ಧ ಇಂಡಿಯಾ ಒಕ್ಕೂಟ ಸದಸ್ಯರ ಆಕ್ರೋಶ

ನವದೆಹಲಿ, ಅ. ೯: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಡೆಗಣಿಸಲಾಯಿತು ಎಂದು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ದೇಶದ ಅತ್ಯಂತ ಹಳೆಯ ಪಕ್ಷದ ನಾಯಕರು ಚುನಾವಣೆಯುದ್ದಕ್ಕೂ ತಮ್ಮನ್ನು ಕಡೆಗಣಿಸಿದರು. ಭವಿಷ್ಯದಲ್ಲಿ ಇಂತಹ ಅಹಂ ಪುನರಾವರ್ತನೆಯಾಗಬಾರದು ಎಂದು ಎಚ್ಚರಿಸಿವೆ. ಉದ್ಧವ್ ಠಾಕ್ರೆ ಬಣದ ಶಿವಸೇನಾ (ಯುಬಿಟಿ) ಪಕ್ಷದ ನಾಯಕರು ಕಾಂಗ್ರೆಸ್ ವಿರುದ್ಧ ಬುಧವಾರ ನೇರ ವಾಗ್ದಾಳಿ ನಡೆಸಿದ್ದಾರೆ. ಒಕ್ಕೂಟದ ಇತರ ಪಕ್ಷಗಳನ್ನು ನಿರ್ಲಕ್ಷಿಸಿದ್ದರ ಪರಿಣಾಮ ಫಲಿತಾಂಶದಲ್ಲಿ ಕಾಣಬಹುದು ಎಂದಿದ್ದಾರೆ. ಇದೇ ರೀತಿ ಪಶ್ಚಿಮ ಬಂಗಳಾದ ಟಿಎಂಸಿ, ಎಎಪಿ, ಸಿಪಿಐಎಂ, ಸಿಪಿಐ ಕೂಡಾ ಕಾಂಗ್ರೆಸ್ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿವೆ. ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನಲ್ಲಿ ಕೆಲಸ ಮಾಡಲಿಲ್ಲ. ತನ್ನ ಪಾಡಿಗೆ ತಾನೇ ಚುನಾವಣೆ ನಡೆಸಿತು. ಅದರ ಪರಿಣಾಮದಿಂದ ಹರಿಯಾಣದಲ್ಲಿ ಒಕ್ಕೂಟಕ್ಕೆ ಸೋಲಾಗಿದೆ ಎಂದು ಪಕ್ಷಗಳ ಮುಖಂಡರು ಆರೋಪಿಸಿದ್ದಾರೆ. ಮಹಾರಾಷ್ಟç ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಜೊತೆಯಲ್ಲಿ ಹಾಗೂ ಜಾರ್ಖಂಡ್‌ನಲ್ಲಿ ಜೆಎಂಎA ಜೊತೆ ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಆದರೆ, ತಾನು ದುರ್ಬಲವಾಗಿರುವ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಆಶ್ರಯ ಪಡೆಯುತ್ತಿರುವ ಕಾಂಗ್ರೆಸ್, ತಾನು ಸಶಕ್ತವಾಗಿರುವ ರಾಜ್ಯಗಳಲ್ಲಿ ಒಕ್ಕೂಟದ ಇತರ ಪಕ್ಷಗಳನ್ನು ಕಡೆಗಣಿಸುತ್ತಿದೆ ಎಂದು ಶಿವಸೇನಾ (ಯುಬಿಟಿ) ಮುಖಂಡ ಸಂಜಯ್ ರಾವುತ್ ದೂರಿದ್ದಾರೆ.