ಮಡಿಕೇರಿ, ಅ. ೮: ಗ್ರಾಮ ಪಂಚಾಯಿತಿ ನೌಕಕರ ನ್ಯಾಯಯುತ ಬೇಡಿಕೆಗಳು ಈಡೇರುವ ತನಕವೂ ಹೋರಾಟ ಮುಂದುವರೆಯಲಿದೆ ಎಂದು ಕೊಡಗು ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾ ಭಿವೃದ್ಧಿ ಸಂಘದ ಅಧ್ಯಕ್ಷ ಹೆಚ್.ಪಿ. ರವೀಶ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಜಿಲ್ಲಾ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಹೋರಾಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಶೇ.೭೦ ರಷ್ಟು ಜನರಿಗೆ ಸ್ಥಳೀಯ ಜನರಿಗೆ ಸರ್ಕಾರಿ ಸೌಲಭ್ಯವನ್ನು ತಲುಪಿಸುವಲ್ಲಿ ಗ್ರಾಮಮಟ್ಟದಲ್ಲಿ ಪ್ರಾಮಾಣಿಕ ಕಾರ್ಯವನ್ನು ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸಾಕಷ್ಟು ಒತ್ತಡವಿದ್ದು, ನಮ್ಮ ಪ್ರಾಮಾಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಅಕ್ಟೋಬರ್ ೪ ಮತ್ತು ೫ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದ ಎಲ್ಲಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮಪಂಚಾಯಿತಿ ಸದಸ್ಯರ ಒಕ್ಕೂಟ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಆದರೆ ರಾಜ್ಯ ಸರ್ಕಾರದಿಂದ ಸೂಕ್ತ ಸ್ಪಂದನ ಸಿಗದಿದ್ದ ಹಿನ್ನೆಲೆ ಜಿಲ್ಲಾ ಮಟ್ಟದಲ್ಲಿ ಅನಿರ್ಧಿಷ್ಟಾವಧಿ ಹೋರಾಟವನ್ನು ಮುಂದುವರೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮುಷ್ಕರವನ್ನು ಸೋಮವಾರದಿಂದ ಆರಂಭಿಸ ಲಾಗಿದ್ದು, ಬೇಡಿಕೆ ಈಡೇರಿಕೆ ತನಕ ಹೋರಾಟ ಮುಂದುವರಿಯುವುದು ಎಂದು ಅವರು ತಿಳಿಸಿದರು.

ಗ್ರಾ.ಪಂ. ಚುನಾಯಿತ ಸದಸ್ಯರ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ಸ್ವಾತಂತ್ರ‍್ಯಾ ನಂತರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಡೆಯುತ್ತಿರುವ ಅತಿ ದೊಡ್ಡ ಮುಷ್ಕರ ಇದಾಗಿದೆ.

ಸಾಕಷ್ಟು ವರ್ಷಗಳಿಂದಲೂ ನಮ್ಮ ಪ್ರಾಮಾಣಿಕ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲವಾದ್ದರಿAದ ಅನಿವಾರ್ಯ ವಾಗಿ ಮುಷ್ಕರ ಕೈಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಅವರು ನೌಕರರ ಬೇಡಿಕೆ ಈಡೇರಿಕೆ ಹಿನ್ನೆಲೆಯಲ್ಲಿ ಸಂಪೂರ್ಣ ಸಹಕಾರವನ್ನು ನೌಕರರ ಸಂಘದಿAದ ಒದಗಿಸಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುನ್ನ ನೌಕರರು ಜಾಥಾ ಕೈಗೊಂಡರು. ಬಳಿಕ ಜಿ.ಪಂ. ಉಪಕಾರ್ಯದರ್ಶಿ ಜಿ. ಧನರಾಜು ಅವರಿಗೆ ಬೇಡಿಕೆ ಪಟ್ಟಿಯನ್ನು ಸಲ್ಲಿಸಿ, ಅಗತ್ಯ ಕ್ರಮ ವಹಿಸುವಂತೆ ಆಗ್ರಹಿಸಿದರು.

ಜಿಲ್ಲಾ ಶಿಕ್ಷಕರ ಸಂಘದ ಮಂಜುನಾಥ್, ಪ.ಪೂ ಕಾಲೇಜು ಉಪನ್ಯಾಸಕ ಸಂಘದ ಅಧ್ಯಕ್ಷ ಪಿಲಿಪ್ ವಾಸ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಂಘದ ಜಿಲ್ಲಾಧ್ಯಕ್ಷ ರವಿ ತಮ್ಮಯ್ಯ, ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸಂಘದ ಕಾರ್ಯದರ್ಶಿ ಪುನೀತ್, ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಂಘದ ಜಿಲ್ಲಾಧ್ಯಕ್ಷ ಅವಿನಾಶ್, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರ ಸಂಘದ ಅಧ್ಯಕ್ಷ ಶಂಕರ್ ಬೇಳೂರು ಹಾಗೂ ಪೌರಕಾರ್ಮಿಕ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಅವರು ನೌಕರರ ಬೇಡಿಕೆ ಈಡೇರಿಕೆ ಹಿನ್ನೆಲೆಯಲ್ಲಿ ಸಂಪೂರ್ಣ ಸಹಕಾರವನ್ನು ನೌಕರರ ಸಂಘದಿAದ ಒದಗಿಸಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುನ್ನ ನೌಕರರು ಜಾಥಾ ಕೈಗೊಂಡರು. ಬಳಿಕ ಜಿ.ಪಂ. ಉಪಕಾರ್ಯದರ್ಶಿ ಜಿ. ಧನರಾಜು ಅವರಿಗೆ ಬೇಡಿಕೆ ಪಟ್ಟಿಯನ್ನು ಸಲ್ಲಿಸಿ, ಅಗತ್ಯ ಕ್ರಮ ವಹಿಸುವಂತೆ ಆಗ್ರಹಿಸಿದರು.

ಜಿಲ್ಲಾ ಶಿಕ್ಷಕರ ಸಂಘದ ಮಂಜುನಾಥ್, ಪ.ಪೂ ಕಾಲೇಜು ಉಪನ್ಯಾಸಕ ಸಂಘದ ಅಧ್ಯಕ್ಷ ಪಿಲಿಪ್ ವಾಸ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಂಘದ ಜಿಲ್ಲಾಧ್ಯಕ್ಷ ರವಿ ತಮ್ಮಯ್ಯ, ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸಂಘದ ಕಾರ್ಯದರ್ಶಿ ಪುನೀತ್, ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಂಘದ ಜಿಲ್ಲಾಧ್ಯಕ್ಷ ಅವಿನಾಶ್, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರ ಸಂಘದ ಅಧ್ಯಕ್ಷ ಶಂಕರ್ ಬೇಳೂರು ಹಾಗೂ ಪೌರಕಾರ್ಮಿಕ ಸಂಘದ ಪದಾಧಿಕಾರಿಗಳು ಹಾಜರಿದ್ದರು.