ವೀರಾಜಪೇಟೆ, ಅ. ೯: ಚುನಾವಣೆಯಲ್ಲಿ ಆಯ್ಕೆ ಮಾಡಿದ ಮತದಾರರಿಗೆ ಚುನಾಯಿತ ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡುವ ಅಧಿಕಾರ ಇದೆ. ಮತದಾರರು ಕೇಳುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಬೇಕಾದ ಕರ್ತವ್ಯ ಜನಪ್ರತಿನಿಧಿಗಳದ್ದಾಗಿರುತ್ತದೆ ಎಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ ಎ.ಎಸ್. ಪೊನ್ನಣ್ಣ ಹೇಳಿದರು.

ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪ್ರಜಾಪ್ರಭುತ್ವದ ಆರಂಭ ಶಾಲಾ ಕಾಲೇಜಿನಿಂದ ಆರಂಭವಾಗುತ್ತದೆ. ಇಂದಿಗೂ ಕಾಲೇಜಿನಲ್ಲಿ ಚುನಾವಣೆ ಆ ಮೂ¯ಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಎನ್ನುವುದು ಸಂತಸದ ವಿಚಾರವಾಗಿದೆ. ಶಾಲಾ-ಕಾಲೇಜು ಜೀವನ ಅಮೂಲ್ಯವಾಗಿರುತ್ತದೆ. ಅದನ್ನು ಮತ್ತೆ ಮರಳಿ ಪಡೆಯಲು ಸಾಧ್ಯವಿಲ್ಲ. ಅಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಇರುವ ಸ್ನೇಹ ಬಾಂಧವ್ಯ ವಾತ್ಸಲ್ಯ ಬೇರೆ ಯಾವ ವಿಚಾರದಲ್ಲೂ ಸಿಗುವುದಿಲ್ಲ. ಎಲ್ಲಾ ಕಡೆ ಒಂದೊAದು ರೀತಿಯ ರಾಜಕಾರಣ, ಸಂಘರ್ಷ, ಸವಾಲುಗಳು ಎದುರಾಗುತ್ತದೆ. ಸಮಾಜದ ಮುಂದೆ ಮಾನವೀಯ ಮೌಲ್ಯಗಳೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಿ ಬದುಕನ್ನು ಸಾರ್ಥಕ ಪಡಿಸಿಕೊಳ್ಳಿ ಎಂದು ಪೊನ್ನಣ್ಣ ಹೇಳಿದರು.

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗದ ಕುಲಸಚಿವ ಸುರೇಶ್ ಅಲೆಟ್ಟಿ ಮಾತನಾಡಿ, ವಿದ್ಯಾರ್ಥಿ ಜೀವನ ಎಂದರೆ ಗುರಿಯನ್ನು ನಿಭಾಯಿಸುವ ವ್ಯವಸ್ಥೆಯಾಗಿರುತ್ತದೆ. ಕ್ರೀಡೆಯ ವಿಚಾರಕ್ಕೆ ಸಂಬAಧಿಸಿದAತೆ ಅಂತರರಾಷ್ಟಿçÃಯ ಮಟ್ಟದ ಆಟಗಳಲ್ಲಿ ಮಾರ್ಗದರ್ಶಕರ ಕೊರತೆ ಎದ್ದು ಕಾಣುತ್ತಿದೆ. ಉತ್ತಮ ಮಾರ್ಗದರ್ಶಕರಿಂದ ಸಣ್ಣಪುಟ್ಟ ರಾಷ್ಟçಗಳು ಒಲಂಪಿಕ್ ಕ್ರೀಡೆಯಲ್ಲಿ ಚಿನ್ನದ ಪದಕ ಪಡೆಯುತ್ತಿವೆ. ಆದ್ದರಿಂದ ಪಠ್ಯದೊಂದಿಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಕ್ರೀಯಾಶೀಲರಾಗಿ ಎಂದು ಹೇಳಿದರು.

ಕಾವೇರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪ್ರೊ. ಇಟ್ಟಿರ ಬಿದ್ದಪ್ಪ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಜೆ.ಸಿ. ದಯಾನಂದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸಾಂಸ್ಕೃತಿಕ ಸಮಿತಿ ಮತ್ತು ರೋರ‍್ಸ್ ಅಧಿಕಾರಿ ಹೆಚ್.ಎಸ್. ವೇಣುಗೋಪಾಲ್, ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಆರ್. ರಘುರಾಜ್, ಕ್ರೀಡಾ ಸಮಿತಿ ಸಂಚಾಲಕ ಎನ್. ಗುರುಪ್ರಸಾದ್ ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕ ಡಾ ಕೆ. ಬಸವರಾಜು ಮತ್ತು ವಿದ್ಯಾರ್ಥಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ವಿದ್ಯಾರ್ಥಿ ಸಮಿತಿಯ ಪದಾಧಿಕಾರಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಆರ್. ಋಗುರಾಜ್ ಪ್ರಮಾಣವಚನ ಬೋಧಿಸಿದರು. ಇದೇ ಸಂದರ್ಭ ಕಾಲೇಜಿನ ವತಿಯಿಂದ ಕ್ಷೇತ್ರದ ಶಾಸಕರು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.