ಶ್ರೀಮಂಗಲ, ಅ. ೯: ಟಿ. ಶೆಟ್ಟಿಗೇರಿಯ ಮಾಯಣಮಾಡ ಮಂದಯ್ಯ ಸ್ಮಾರಕ (ಎಂ.ಎA. ಸ್ಮಾರಕ ಸರ್ಕಾರಿ ಪ್ರೌಢಶಾಲೆ) ಸರಕಾರಿ ಪ್ರೌಢಶಾಲೆಯಲ್ಲಿ ೧೫೫ನೇ ಗಾಂಧಿ ಜಯಂತಿ ಆಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ದಾನಿಗಳು ಹಾಗೂ ಸಮಾಜ ಸೇವೆಗಾಗಿ ರಾಜ್ಯ ಸರ್ಕಾರದ ಪ್ರಶಸ್ತಿ ಪುರಸ್ಕೃತರಾದ ಕೈಬುಲಿರ ಪಾರ್ವತಿ ಬೋಪಯ್ಯ ಅವರಿಗೆ, ಕೊಡಗು ಜಿಲ್ಲಾಮಟ್ಟದ ಮೇಲಾಟದ ಸ್ಪರ್ಧೆ ೨೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ೧೦೦ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದ ಶಾಲಾ ವಿದ್ಯಾರ್ಥಿನಿ ದೀಪಿಕಾ ಹಾಗೂ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿದ ವೀರಾಜಪೇಟೆ ಉಪಾಧ್ಯಾಯರ ಸ್ಟೋರ್ಸ್ ನಿರ್ದೇಶಕ ಚೊಟ್ಟೆಯಾಂಡಮಾಡ ಬೋಸ್ ವಿಶ್ವನಾಥ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು ಮುಖ್ಯಶಿಕ್ಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.