ಕೂಡಿಗೆ, ಅ. ೯: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆಯ ಶಿಬಿರವು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾರುಕಟ್ಟೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಚಾಲನೆ ನೀಡಿ ಮಾತನಾಡಿ, ಆರೋಗ್ಯವೇ ಜೀವನದ ಅವಿಭಾಜ್ಯ ಅಂಗ, ಎಲ್ಲರೂ ತಮ್ಮ ಆರೋಗ್ಯ ತಪಾಸಣೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಫಿಲೋಮಿನಾ, ಪಾರ್ವತಮ್ಮ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೀಪಿಕಾ, ಅಭಿವೃದ್ಧಿ ಅಧಿಕಾರಿ ಸಂತೋಷ್, ಹಿರಿಯ ಅರೋಗ್ಯ ನಿರೀಕ್ಷಕರಾದ ಮುಖೇಶ್, ಸಗೀನ, ಕರವಸೂಲಿಗಾರ ಅವಿನಾಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದು ಆರೋಗ್ಯ ತಪಾಸಣೆಯಲ್ಲಿ ತೊಡಗಿದರು.