ಕೂಡಿಗೆ, ಅ. ೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದು ಗೂರು ಕಾಳಿದೇವನ ಹೊಸೂರು ಭಾಗದಲ್ಲಿ ಕಳೆದ ಒಂದು ವಾರ ದಿಂದಲೂ ಕಾಡಾನೆಗಳ ಹಾವಳಿಯಿಂದಾಗಿ ಬೆಳೆಗಳು ಕಾಡಾನೆಗಳ ಪಾಲಾಗುತ್ತಿದೆ.
ಕಳೆದ ಒಂದು ವಾರದಿಂದಲೂ ಸತತವಾಗಿ ಆನೆಕಾಡು ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಮತ್ತು ಯಡನವಾಡು ಕಡೆಯಿಂದ ಬಂದಿರುವ ಕಾಡಾನೆಗಳ ಗ್ರಾಮದ ವ್ಯಾಪ್ತಿಯಲ್ಲಿ ಉಳಿದಿರುವ ಹಿನ್ನೆಲೆಯಲ್ಲಿ ಮತ್ತು ಈ ಸಾಲಿನಲ್ಲಿ ಅಪಾರ ಪ್ರಮಾಣದ ಬೆಳೆಯು ನಷ್ಟವಾಗಿರುವ ಹಿನ್ನೆಲೆಯಲ್ಲಿ ಕುಶಾಲನಗರ ವಲಯ ಅರಣ್ಯ ಕಛೇರಿಯ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ವ್ಯಾಪ್ತಿಯ ನೂರಾರು ಗ್ರಾಮಸ್ಥರು ಎಚ್ಚರಿಸಿದ್ದಾರೆ.