ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಾಂಧಿಜಯAತಿ ಅಂಗವಾಗಿ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಆರ್. ನಾಗೇಂದ್ರ ನೆರವೇರಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಕುಡೆP್ಕಲ್ ನಿತ್ಯನಂದ, ಗಂಗಮ್ಮ, ಎಸ್.ಡಿ.ಎಂ.ಸಿ.ಯ ಉಪಾಧ್ಯಕ್ಷ ದಯಾ, ಉಪಾನ್ಯಾಸಕರಾದ ಮಂಜುನಾಥ್, ಪ್ರದೀಪ್, ನಿತ್ಯಶ್ರೀ ಹಾಜರಿದ್ದರು. ಮುಖ್ಯಶಿಕ್ಷಕ ಸಣ್ಣಸ್ವಾಮಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭ ಕೆ.ಆರ್. ನಿತ್ಯಾನಂದ ಶಾಲೆಯ ೭೨ ವಿದ್ಯಾರ್ಥಿಗಳಿಗೆ ಟಿ.ಶರ್ಟ್ ಗಳನ್ನು ಮತ್ತು ಬಸವನಹಳ್ಳಿಯ ಲ್ಯಾಂಪ್ಸ್ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಹನಿಕುಮಾರ್ ಅವರು ೫೦ ವಿದ್ಯಾರ್ಥಿಗಳಿಗೆ ಐ.ಡಿ.ಕಾರ್ಡ್ಗಳನ್ನು ವಿತರಿಸಿದರು.ನಾಪೋಕ್ಲು: ಇಲ್ಲಿನ ಅಂಕುರ್ ಪಬ್ಲಿಕ್ ಶಾಲೆಯ ಲಿಯೋ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತಿç ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲಿಯೋ ಕ್ಲಬ್ ಸದಸ್ಯರು ಶಾಲಾ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಿ, ನಾಪೋಕ್ಲು- ಭಾಗಮಂಡಲ ಮುಖ್ಯ ರಸ್ತೆ ಬಸ್ ತಂಗುದಾಣದ ಸುತ್ತಮುತ್ತ ಇದ್ದ ಪ್ಲಾಸ್ಟಿಕ್‌ಗಳನ್ನು ಸಂಗ್ರಹಿಸಿ ಪರಿಸರವನ್ನು ಶುಚಿಗೊಳಿಸಿದರು.

ಗಾಂಧೀಜಿಯವರ ಚಿಂತನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಲಿಯೋ ಕ್ಲಬ್ ಸದಸ್ಯರು ಕಾರ್ಯ ನಿರ್ವಹಿಸಿದ್ದು ಕಾರ್ಯಕ್ರಮದಲ್ಲಿ ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಕೇಟೋಳಿರ ರತ್ನ ಚರ್ಮಣ, ಶಿಕ್ಷಕ ವೃಂದ ಹಾಜರಿದ್ದರು.ವೀರಾಜಪೇಟೆ: ಪಟ್ಟಣದ ಮದರ್ ಥೆರೆಸಾ ಸೇವಾ ಕೇಂದ್ರದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸಂತ ಅನ್ನಮ್ಮ ಚರ್ಚ್ ಸಮೀಪದ ಸ್ಮಶಾನ ಪ್ರದೇಶದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.

ಸಂತ ಅನ್ನಮ್ಮ ಚರ್ಚ್ನ ಪ್ರಧಾನ ಧರ್ಮಗುರುಗಳಾದ ರೆ.ಫಾ. ಜೇಮ್ಸ್ ಡೊಮಿನಿಕ್ ಅವರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ವಚ್ಛತಾ ಅಭಿಯಾನದಲ್ಲಿ ಪ್ರತಿಯೊಬ್ಬರು ತೊಡಗಬೇಕು. ಸಮಾಜಕ್ಕೆ ತನ್ನ ಕೈಲಾದಷ್ಟು ಸೇವೆಯನ್ನು ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಮದರ್ ಥೆರೆಸಾ ಸೇವಾ ಕೇಂದ್ರದ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದು ಹೇಳಿದರು. ತದನಂತರ ಸೇವಾ ಕೇಂದ್ರದ ಸದಸ್ಯರು ಸ್ಮಶಾನ ಪ್ರದೇಶದಲ್ಲಿ ಶ್ರಮದಾನ ಮಾಡಿದರು.

ಈ ಸಂದರ್ಭ ಮದರ್ ಥೆರೇಸಾ ಸೇವಾ ಕೇಂದ್ರದ ಅಧ್ಯಕ್ಷ ಪೆರಿಗ್ರಿನ್ ಮಚ್ಚಾಡೋ, ಪದಾಧಿಕಾರಿಗಳಾದ ಜೇಮ್ಸ್ ಮೆನೆಜಸ್, ಜೋಕಿಂ ರಾಡ್ರಿಗಸ್, ಪೌಲ್ ಕ್ಷೇವಿಯರ್, ಚಾರ್ಲ್ಸ್ ಡಿಸೋಜಾ, ಚಾರ್ಲಿ ಪಿಂಟೋ, ಜಸಿಂತ ಪಿಂಟೋ, ಪಿಯೂಸ್ ಮೆನೆಜೆಸ್ ಮೊದಲಾದವರು ಹಾಜರಿದ್ದರು.

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಮೊದಲಿಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯಾರ್ಥಿಗಳು ರಘುಪತಿ ರಾಘವ ರಾಜಾರಾಮ್ ಗೀತೆಯನ್ನು ಹಾಡಿದರು. ಗಾಂಧೀಜಿಯವರ ಜೀವನ ಸಾಧನೆಯ ಬಗ್ಗೆ ಶಾಲಾ ಗಣಿತ ಶಿಕ್ಷಕ ಜಿ.ಸಿ. ಸತ್ಯನಾರಾಯಣ ವಿದ್ಯಾರ್ಥಿಗಳಿಗೆ ತಿಳಿಸಿದರು.

ನಂತರ ಚೆಟ್ಟಳ್ಳಿ ಸ್ಪೋರ್ಟ್ಸ್ ಕ್ಲಬ್ ಹಾಗೂ ಚೆಟ್ಟಳ್ಳಿ ಎಜುಕೇಶನ್ ಸೊಸೈಟಿ ಸಹಯೋಗದಲ್ಲಿ ಶಾಲಾ ಸಮಿತಿ ಉಪಾಧ್ಯಕ್ಷ ಸೋಮೆಯಂಡ ದಿಲೀಪ್ ಅಪ್ಪಚ್ಚು ಹಾಗೂ ಸಂಚಾಲಕರಾದ ಮುಳ್ಳಂಡ ರತ್ತು ಚಂಗಪ್ಪ, ನಿರ್ದೇಶಕರಾದ ಪೇರಿಯನ ಶ್ಯಾಮ್, ಮುಳ್ಳಂಡ ಮಾಯಮ್ಮ ತಮ್ಮಯ್ಯ, ಪಳಂಗAಡ ಗೀತಾ ಸುಬ್ಬಯ್ಯ, ಕೊಂಗAಡ ವಿಜಯ್ ಮುತ್ತಣ್ಣ, ಶಾಲಾ ಮುಖ್ಯೋಪಾಧ್ಯಾಯಿನಿ ಕೆ. ತಿಲಕ, ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಚೆಟ್ಟಳ್ಳಿ ಪ್ರೌಢಶಾಲೆಯಿಂದ ಚೆಟ್ಟಳ್ಳಿ ಪಟ್ಟಣದವರೆಗಿನ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶುಚಿಗೊಳಿಸಿದರು.ಮಡಿಕೇರಿ: ಗಾಳಿಬೀಡಿ ನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಅಕ್ಟೋಬರ್ ೨ ರಂದು ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಮತ್ತು ಭಾರತದ ಎರಡನೇ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತಿçÃಜಿಯವರ ಜಯಂತಿಯನ್ನು ಆಚರಿಸಲಾಯಿತು. ಪ್ರಭಾರ ಪ್ರಾಚಾರ್ಯರಾದ ಸುಧಾಮಣಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭ ಗಾಂಧೀಜಿಯವರ ಮೆಚ್ಚಿನ ಭಜನೆಗಳನ್ನು ವೈಷ್ಣವ ಜನತೋ ತೇನೇ ಕಹಿಯೆಜೆ ಮತ್ತು ರಘುಪತಿ ರಾಘವ ರಾಜಾರಾಂಗಳನ್ನು ಹಾಡಲಾಯಿತು. ವಿದ್ಯಾರ್ಥಿಗಳು ಗಾಂಧೀಜಿ ಹಾಗೂ ಶಾಸ್ತಿçÃಜಿಯವರ ಆದರ್ಶ ಜೀವನವನ್ನು ಸ್ಮರಿಸಿದರು. ಶಿಕ್ಷಕ ಅರ್ಜುನ ಪಂಡಿತ್ ಅವರು ಗಾಂಧೀಜಿ ಮತ್ತು ಶಾಸ್ತಿçÃಜಿಯವರ ಜೀವನದ ಅನುಕರಣೀಯ ಆದರ್ಶಗಳ ಬಗ್ಗೆ ಹೇಳಿದರು. ಭಜನಾ ಕಾರ್ಯಕ್ರಮವನ್ನು ಶಿಕ್ಷಕ ಗಣೇಶ ಹೆಗಡೆ ನಡೆಸಿಕೊಟ್ಟರು. ಮಾರುತಿ ದಾಸಣ್ಣ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು.

ಸುಂಟಿಕೊಪ್ಪ: ಗರಗಂದೂರು ಮೊರಾರ್ಜಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಸುಂಟಿಕೊಪ್ಪ ಮಹಾತ್ಮಾ ಗಾಂಧಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ೨೫ ಕ್ಕೂ ಹೆಚ್ಚು ಹಣ್ಣಿನ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಲು ಅಲ್ಲಿನ ವಿದ್ಯಾರ್ಥಿಗಳಿಗೆ ದತ್ತು ನೀಡಲಾಯಿತು.

೧೯೩೪ರಲ್ಲಿ ಮಹಾತ್ಮಾ ಗಾಂದೀಜಿಯವರು ಕೊಡಗು ಜಿಲ್ಲೆಗೆ ಬಂದು ಗುಂಡುಗುಟ್ಟಿಯ ಮಂಜನಾಥಯ್ಯನವರ ಬಂಗಲೆಗೆ ಆಗಮಿಸಿ ಸಾರ್ವಜನಿಕ ಸಭೆಯನ್ನು ಏರ್ಪಡಿಸಿ ಸ್ವಾತಂತ್ರö್ಯ ಹೋರಾಟದ ಕಿಚ್ಚನ್ನು ಹಚ್ಚಿದ್ದರು. ಅವರು ಬಂದು ತಂಗಿ ಹೋದ ಸವಿನೆನಪಿಗಾಗಿ ಆ ತೋಟದ ಮಾಲೀಕರಾದ ಮುಕುಲ್ ಮಹೀಂದ್ರ ಅವರೊಂದಿಗೆ ಒಂದು ಟ್ರಸ್ಟ್ ರಚಿಸಿದ್ದು ಆ ಟ್ರಸ್ಟ್ ಮೂಲಕ ಪ್ರತೀ ವರ್ಷ ಗಾಂಧಿ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಡೆನಿಸ್ ಡಿಸೋಜ ಹೇಳಿದರು. ಟ್ರಸ್ಟ್ ಸಂಚಾಲಕರಾದ ಎಂ.ಇ. ಮೊಹಿದ್ದೀನ್ ಅವರು ಮಾತನಾಡಿದರು.

ಸಭೆಯಲ್ಲಿ ಟ್ರಸ್ಟಿಗಳಾದ ರಮೇಶ್ ಆರ್. ಪಿಳ್ಳೆ, ಮೊರಾರ್ಜಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಪಿ. ಚಂದ್ರಶೇಖರ್ ಮತ್ತು ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುಂಟಿಕೊಪ್ಪ: ಗಾಂಧಿ ಜಯಂತಿ ಹಾಗೂ ಲಾಲುಬಹದ್ದೂರ್ ಶಾಸ್ತಿçಯವರ ಜನ್ಮ ದಿನಾಚರಣೆ ಅಂಗವಾಗಿ ವಿಶೇಷ ಶಿಬಿರದ ಶಿಬಿರಾರ್ಥಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು, ಸುಂಟಿಕೊಪ್ಪ ಲಯನ್ಸ್ ಸಂಸ್ಥೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಿ ಜಾಗೃತಿ ಜಾಥ ಹಾಗೂ ಸ್ವಚ್ಛತಾ ಕಾರ್ಯ ನಡೆಸಿದರು.

ಮಾದಾಪುರ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ವಿಶೇಷ ಶಿಬಿರದ ಶಿಬಿರಾರ್ಥಿಗಳ ಒಂದು ತಂಡ ಪಟ್ಟಣದಲ್ಲಿ ಕಾರ್ಯಾಚರಿಸುತ್ತಿರುವ ವಾಣಿಜ್ಯ ಮಳಿಗೆ, ಕಚೇರಿಗಳು, ಸಂಘ ಸಂಸ್ಥೆ ಹಾಗೂ ವಾಸದ ಮನೆಗಳಿಗೆ ತೆರಳಿ ಸ್ವಚ್ಛತೆಯ ಬಗ್ಗೆ ಭಿತ್ತಿ ಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರೆ, ಮತ್ತೊಂದು ವಿದ್ಯಾರ್ಥಿಗಳ ತಂಡ ಮತ್ತು ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಪಟ್ಟಣದಿಂದ ಗದ್ದೆಹಳ್ಳದವರೆಗೆ ತೆರಳಿ ಬೀದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿ, ಕಸ ಕಡ್ಡಿಗಳನ್ನು ಶುಚಿಗೊಳಿಸಿದರಲ್ಲದೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.

ಈ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಮಂಜುನಾಥ್, ರಫೀಕ್‌ಖಾನ್, ಶಿಬಿರಾಧಿಕಾರಿ ಹಾಗೂ ಉಪನ್ಯಾಸಕಿ ಮನೋಹರ್ ಎನ್.ಎನ್. ಮತ್ತು ಮಾದಾಪುರ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಪ್ರಮೀಳಾ ಹಾಗೂ ಶಿಬಿರದ ವಿದ್ಯಾರ್ಥಿಗಳು ಇದ್ದರು. ಮಡಿಕೇರಿ: ಇಂದಿನ ಯುವ ಜನಾಂಗ ಮಹಾತ್ಮ ಗಾಂಧೀಜಿಯವರ ನೈಜ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಸತ್ಯ ಮತ್ತು ಅಹಿಂಸೆಯನ್ನು ಪಾಲಿಸಿಕೊಂಡು ಜೀವನ ನಡೆಸಬೇಕೆಂದು ಸುಂಟಿಕೊಪ್ಪ ನಾಡ ಪ್ರೌಢ ಶಾಲೆಯ ವಿದ್ಯಾರ್ಥಿ ಶ್ರೀಶಾ ಅಭಿಪ್ರಾಯಪಟ್ಟರು.

ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಯುವಕ ಸಂಘದಿAದ ಆಯೋಜಿತ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತಿçಯ ಜನ್ಮದಿನ ಹಾಗೂ ಶ್ರಮದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು. ಮಹಾತ್ಮ ಗಾಂಧೀಜಿಯವರು ಪ್ರಸ್ತುತ ಸಮಾಜಕ್ಕೆ ಮಾದರಿಯಾಗಿದೆ. ನಾವೆಲ್ಲರೂ ಗಾಂಧೀಜಿಯ ಜೀವನ ಶೈಲಿಯನ್ನು ಸರಿಯಾಗಿ ಅರ್ಥೈಸಿಕೊಂಡು ಮುನ್ನಡೆಯಬೇಕು.

ಗಾಂಧೀಜಿಯವರ ತ್ಯಾಗ, ಹೋರಾಟದ ಫಲವಾಗಿ ನಾವೆಲ್ಲರೂ ಇಂದು ಒಂದುಗೂಡಿ ಜೀವನ ನಡೆಸುತ್ತಿದ್ದೇವೆ. ಅದಲ್ಲದೇ ಮುಖ್ಯವಾಗಿ ಇಂದಿನ ಯುವಸಮೂಹ ಮತ್ತು ವಿದ್ಯಾರ್ಥಿಗಳು ಗಾಂಧೀಜಿಯವರ ಅಹಿಂಸಾ ಮಾರ್ಗವನ್ನು ಅನುಸರಿಸಬೇಕಾಗಿದೆ ಎಂದು ಶ್ರೀಶಾ ಕರೆ ನೀಡಿದರು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಟಿ.ಎನ್. ರತೀಶ್ ಮಾತನಾಡಿ, ಗಾಂಧೀಜಿಯವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದರು. ನಾವೆಲ್ಲರೂ ಸೇರಿ ನಮ್ಮ ಗ್ರಾಮ, ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛತೆಯಿಂದ ಇಡಬೇಕಾಗಿದೆ. ಮುಖ್ಯವಾಗಿ ಪ್ಲಾಸ್ಟಿಕ್ ಮುಕ್ತ ಸಮಾಜವನ್ನು ನಿರ್ಮಿಸಬೇಕಾಗಿದೆ ಎಂದರು.

ಕಳೆದ ಎರಡು ವರ್ಷಗಳಿಂದ ಕಂಡಕರೆಯ ಗಾಂಧಿ ಯುವಕ ಸಂಘವು ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಸಮವಸ್ತç, ಶಾಲೆಗೆ ಬೇಕಾದ ಸವಲತ್ತುಗಳನ್ನು ನೀಡಿದೆ. ಅದಲ್ಲದೇ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಾ, ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ನೀಡುತ್ತಿರುವುದು ಶ್ಲಾಘನೀಯ ವಿಷಯವಾಗಿದೆ ಎಂದು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಟಿ.ಎನ್. ರತೀಶ್ ಅಭಿಪ್ರಾಯಪಟ್ಟರು. ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಯುವಕ ಸಂಘದಿAದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

೧ ರಿಂದ ೪ನೇ ತರಗತಿಯವರೆಗೆ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ೪ನೇ ತರಗತಿಯ ಸುಬ್ಹಾನ್ ಕೆ.ಹೆಚ್. ಪ್ರಥಮ, ಶುಹೈಬ್ ದ್ವಿತೀಯ ಹಾಗೂ ನಿಯಾಝ್ ತೃತೀಯ ಸ್ಥಾನ ಪಡೆದುಕೊಂಡರು. ೫ರಿಂದ ೭ನೇ ತರಗತಿಯ ಮಕ್ಕಳಿಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ೭ನೇ ತರಗತಿಯ ಇಭಾ ಪ್ರಥಮ, ಆರನೇ ತರಗತಿಯ ಆಶಿಕ್ ದ್ವಿತೀಯ ಹಾಗೂ ಐದನೇ ತರಗತಿಯ ರಿಶಿತಾ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತರಿಗೆ ಗಾಂಧಿ ಯುವಕ ಸಂಘದಿAದ ಟ್ರೋಫಿ ನೀಡಿ ಗೌರವಿಸಲಾಯಿತು.

೨೦೨೩-೨೪ನೇ ಸಾಲಿನಲ್ಲಿ ೭ನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಾದ ನಜಾ ಫಾತಿಮಾ, ದ್ವಿತೀಯ ಸ್ಥಾನ ಪಡೆದ ಅಫ್ರೀನಾ, ತೃತೀಯ ಸ್ಥಾನ ಪಡೆದ ಶಮ್ನಾ ಫಾತಿಮಾ ಅವರಿಗೆ ಗಾಂಧಿ ಯುವಕ ಸಂಘದಿAದ ಬಹುಮಾನ ನೀಡಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಗಾಂಧಿ ಯುವಕ ಸಂಘದಿAದ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿ ವಿನೋದ ನಿರೂಪಿಸಿ, ಸುಜಿತ್ ಸ್ವಾಗತಿಸಿದರು. ಈ ಸಂದರ್ಭ ಗಾಂಧಿ ಯುವಕ ಸಂಘದ ಅಧ್ಯಕ್ಷ ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪೂಜಾ ಮುರಳಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮಜೀದ್ ಕಂಡಕರೆ, ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸವಾದ್ ಉಸ್ಮಾನ್, ಹಿರಿಯ ಉಪಾಧ್ಯಕ್ಷ ಷರೀಫ್ ಪಿ.ಎಂ., ಉಪಾಧ್ಯಕ್ಷ ಇರ್ಷಾದ್ ಕೆ.ಎಂ., ಸಂಘಟನಾ ಕಾರ್ಯದರ್ಶಿ ಉಬೈಸ್ ಸಿ.ಎ. ಹಾಗೂ ಗಾಂಧಿ ಯುವಕ ಸಂಘದ ಪದಾಧಿಕಾರಿಗಳು, ಎಸ್.ಡಿ.ಎಂ.ಸಿ. ಸದಸ್ಯರು ಇದ್ದರು.ಮಡಿಕೇರಿ: ಭಾರತೀಯ ಜನತಾ ಪಾರ್ಟಿ ಮಡಿಕೇರಿ ಯುವ ಮೋರ್ಚಾ ಗ್ರಾಮಾಂತರ ಮಂಡಲ ವತಿಯಿಂದ ಭಾಗಮಂಡಲದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಭಾಗಮಂಡಲ ಪ್ರವೇಶ ದ್ವಾರದಿಂದ ಆರಂಭವಾದ ಸ್ವಚ್ಚತಾ ಕಾರ್ಯದಲ್ಲಿ ಸುಮಾರು ೩೫ ರಿಂದ ೪೦ ಮಂದಿ ಯುವ ಮೋರ್ಚಾ ಮತ್ತು ಸ್ಥಳೀಯ ಹಾಗೂ ಕಕ್ಕಬ್ಬೆ ಭಾಗದಿಂದ ಬಂದ ಬಿಜೆಪಿ ಕಾರ್ಯಕರ್ತರು ರಸ್ತೆ ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಯಂಪ್ರೇರಿತರಾಗಿ ಹೆಕ್ಕಿ ಶುಚಿಗೊಳಿಸಿದರು.

ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷ ಚೇತನ್ ಬಂಗೇರ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಭಾಗಮಂಡಲ ಪಂಚಾಯಿತಿ ಅಧ್ಯಕ್ಷ ಕಾಳನ ರವಿ, ಶಕ್ತಿ ಕೇಂದ್ರದ ಪ್ರಮುಖ ರಾಜೀವ್, ಜಿಲ್ಲಾ ಬಿಜೆಪಿ ಪ್ರಮುಖರುಗಳಾದ ಮಹೇಶ್ ಜೈನಿ, ಪ್ರಶಾಂತ್ ಭೀಮಯ್ಯ, ಯುವ ಮೋರ್ಚಾ ಪ್ರಮುಖರಾದ ಪ್ರವೀಣ್ ಮಜಿಕೋಡಿ, ಹೇಮಂತ್ ತೋರೆರ, ಶರತ್ ಪದಕಲ್ಲು, ಆದೇಶ್, ತಮ್ಮಯ್ಯ, ರೋಷನ್, ಬಿಪಿನ್, ಇನ್ನಿತರ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ವೀರಾಜಪೇಟೆ: ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್ ಸಾಲ್ಡಾನ ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಗಾಂಧೀಜಿ ನಮ್ಮ ರಾಷ್ಟçಪಿತ ಅವರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಬಹುಮುಖ್ಯವಾದದ್ದು, ಅವರ ಸರಳ ಜೀವನ, ರಾಮರಾಜ್ಯ, ಗ್ರಾಮ ಸ್ವರಾಜ್ಯ ಪರಿಕಲ್ಪನೆ ನಿಜಕ್ಕೂ ಅದ್ಭುತವಾದದ್ದು, ಅವರು ಬೋಧಿಸಿದ ಕೆಲವು ತತ್ವಗಳನ್ನಾದರೂ ಇಂದಿನ ಯುವ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸರಳತೆಯಿಂದ ಜೀವನ ನಡೆಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕೆಂದರು.

ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಕ್ಷಿತಾ ನಾಯ್ಕ್ ಅವರು ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಸ್ವಚ್ಛತಾ ಪ್ರತಿಜ್ಞೆಯನ್ನು ತೆಗೆದುಕೊಂಡ ವಿದ್ಯಾರ್ಥಿಗಳು ನಂತರ ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರಾದ ನಾಗರಾಜು. ಸೋಮಣ್ಣ, ಕಚೇರಿ ಸಿಬ್ಬಂದಿಗಳಾದ ಸೋಮನಾಥ್, ಜಯಮ್ಮ, ಶಶಿಕಲಾ, ಸೋಮಣ್ಣ , ಸುಮತಿ, ರೇಷ್ಮಾ, ಎನ್‌ಸಿಸಿ ಅಧಿಕಾರಿ ಭೋಜಮ್ಮ, ಎನ್.ಎಸ್.ಎಸ್ ಯೋಜನಾಧಿಕಾರಿ ಸುನಿಲ್ ಕುಮಾರ್ ಹಾಗೂ ಸ್ವಯಂಸೇವಕರು ಹಾಜರಿದ್ದರು.

ಕಡಂಗ : ಕಡಂಗ ಸ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಶಾಂತಿಕುಮಾರಿ ಪಿ.ಎಂ., ಗಾಂಧಿ, ಶಾಸ್ತಿç ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾದ ಪವಿತ್ರ ಅವರು ಹಾಜರಿದ್ದರು. ಶ್ರಮದಾನವನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ದಿನದ ಮಹತ್ವವನ್ನು ತಿಳಿಸಲಾಯಿತು. ಶಾಲಾ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಚೆಯ್ಯಂಡಾಣೆ: ನರಿಯಂದಡ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟçಪಿತ ಮಹಾತ್ಮಾಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ವಹಿಸಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಗ್ರಾಮ ಪಂಚಾಯಿತಿ ವತಿಯಿಂದ ಚೆಯ್ಯಂಡಾಣೆ ಪಟ್ಟಣದ ರಸ್ತೆ ಬದಿಯಲ್ಲಿ ಶ್ರಮದಾನ ನಡೆಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಮಾತನಾಡಿ, ಪಟ್ಟಣದಲ್ಲಿರುವವರು ಶುಚಿತ್ವವನ್ನು ಕಾಪಾಡಿಕೊಂಡು ಮುಂದಿನ ದಿನಗಳಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ತೊಂದರೆಗಳು ಉದ್ಭವಿಸದ ರೀತಿಯಲ್ಲಿ ಕಾಪಾಡಿಕೊಳ್ಳಬೇಕೆಂದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಮಾಜಿ ಅಧ್ಯಕ್ಷ ರಾಜೇಶ್ ಅಚ್ಚಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯರು ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸಾರ್ವಜನಿಕರು, ಪಂಚಾಯಿತಿ ಸಿಬ್ಬಂದಿಗಳು ಇದ್ದರು. ಲೀಲಾವತಿ ಪ್ರಾರ್ಥಿಸಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಸ್ವಾಗತಿಸಿ ವಂದಿಸಿದರು.