ಸಿದ್ದಾಪುರ, ಅ. ೯: ಅಮ್ಮತ್ತಿಯ ವಾಹನ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವನ್ನು ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮೂಕೊಂಡ ಬೋಸ್ ದೇವಯ್ಯ ಮರಣ ಹೊಂದಿದ ಹಿನ್ನೆಲೆಯಲ್ಲಿ ಈ ಬಾರಿಯ ಆಯುಧ ಪೂಜೆ ಕಾರ್ಯಕ್ರಮಗಳನ್ನು ಸರಳವಾಗಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.