ಕೂಡಿಗೆ, ಅ. ೮: ಕೂಡಿಗೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಧ ಸಂತೋಷ್, ಉಪಾಧ್ಯಕ್ಷೆಯಾಗಿ ಅಶ್ವಿನಿ ಯೋಗೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.
ಸಂಘದ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಒಂದೊAದು ನಾಮಪತ್ರ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಆಶಾ ಅವರು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಘೋಷಣೆ ಮಾಡಿದರು.
ಈ ಸಂದರ್ಭ ಸಂಘದ ನಿರ್ದೇಶಕರಾದ ಭಾರತಿ, ವಿಜಯ, ಪಂಕಜಾ, ವೀಣಾ, ಲಕ್ಷಿö್ಮ, ಮಣಿ, ಪಲ್ಲವಿ, ಸಾಕಮ್ಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷಿö್ಮ ಹಾಜರಿದ್ದರು.