ಮಡಿಕೇರಿ, ಅ. ೧೦: ಚೆಟ್ಟಳ್ಳಿ ಸಮೀಪದ ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪೂಜಾ ಮುರಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಂಡಕರೆ ಶಾಲೆಯಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಪೂಜಾ ಅವರನ್ನು ಒಮ್ಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಪೂಜಾ ಮುರಳಿ, ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಓದಿದ ಎಲ್ಲಾ ಹಳೆಯ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಸಮ್ಮಿಲನ ಕಾರ್ಯಕ್ರಮ ಮಾಡುವುದರ ಮೂಲಕ ಹಳೆಯ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಗೆ ತರುವ ಕೆಲಸ ಮಾಡುವುದರ ಮೂಲಕ ಶಾಲೆಯ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭ ಶಾಲೆಯ ಪ್ರಬಾರ ಮುಖ್ಯೋಪಾಧ್ಯಾಯ ಟಿ.ಎನ್. ರತೀಶ್, ಸುಜಿತ್, ವಿನೋದ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮಜೀದ್, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.