ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ತಾ. ೧೪ಕ್ಕೆ ತೀರ್ಪು

ಬೆಂಗಳೂರು, ಅ. ೧೦: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರ ಮುಕ್ತಾಯಗೊಳಿಸಿದ್ದು, ತಾ. ೧೪ಕ್ಕೆ ತೀರ್ಪು ಕಾಯ್ದಿರಿಸಿದೆ. ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ೫೭ನೇ ಸಿಸಿಹೆಚ್ ನ್ಯಾಯಾಲಯ, ಆರೋಪಿ ಪರ ವಕೀಲ ಸಿ.ವಿ. ನಾಗೇಶ್ ಹಾಗೂ ಎಸ್‌ಪಿಪಿ ಪ್ರಸನ್ನ ಕುಮಾರ್ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ. ತಾ. ೧೪ ರಂದು ಎ೨ ಆರೋಪಿ ದರ್ಶನ್‌ಗೆ ಜಾಮೀನು ಸಿಗುತ್ತದೊ ಇಲ್ಲವೋ ಎಂಬುದು ತಿಳಿಯಲಿದೆ. ಅದೇ ದಿನ ಪ್ರಕರಣದ ಎ೧ ಆರೋಪಿ ಪವಿತ್ರಾ ಗೌಡ, ಎ೮ ರವಿಶಂಕರ್, ಎ೧೧, ಎ೧೨ ಹಾಗೂ ಎ೧೩ ಅವರ ಜಾಮೀನು ಅರ್ಜಿಯ ಆದೇಶವೂ ಹೊರಬೀಳಲಿದೆ.

ನಕಲಿ ದಾಖಲೆ ಸೃಷ್ಟಿಸಿ ವಂಚನೆ-ಐವರ ಬಂಧನ

ಬೆAಗಳೂರು, ಅ. ೧೦: ಕೆಂಗೇರಿ ಸಮೀಪದ ಚಲ್ಲಘಟ್ಟದಲ್ಲಿ ಆರು ಎಕರೆ ಜಮೀನಿಗೆ ಸಂಬAಧಿಸಿದAತೆ ಸುಳ್ಳು ದಾಖಲೆ ಸೃಷ್ಟಿಸಿ ೭೦ ಕೋಟಿ ರೂಪಾಯಿ ಪರಿಹಾರ ಪಡೆಯಲು ಯತ್ನಿಸಿದ ಐವರು ಆರೋಪಿಗಳನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್, ನಾಗರಾಜ್, ರವಿಕುಮಾರ್, ಭರತ್ ಮತ್ತು ಸ್ವಾಮಿ ಬಂಧಿತರು. ಐವರು ಆರೋಪಿಗಳ ಪೈಕಿ ನಾಗರಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಉಳಿದ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಡಿಸಿಪಿ (ಕೇಂದ್ರ) ಹೆಚ್.ಟಿ. ಶೇಖರ್ ತಿಳಿಸಿದ್ದಾರೆ.

‘ಒಂದು ರಾಷ್ಟç ಒಂದು ಚುನಾವಣೆ' ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇರಳ ವಿಧಾನಸಭೆ

ತಿರುವನಂತಪುರA, ಅ. ೧೦: ‘ಒಂದು ರಾಷ್ಟç ಒಂದು ಚುನಾವಣೆ’ ಪ್ರಸ್ತಾವನೆ ಸಂವಿಧಾನ ವಿರೋಧಿ ಎಂದು ಟೀಕಿಸಿದ ಕೇರಳ ವಿಧಾನಸಭೆಯು, ಗುರುವಾರ ಪ್ರಸ್ತಾವನೆಯನ್ನು ತಿರಸ್ಕರಿಸಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ ಮತ್ತು ಅದನ್ನು ಜಾರಿಗೊಳಿಸದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ. ರಾಜೇಶ್ ಮಂಡಿಸಿದ ನಿರ್ಣಯದಲ್ಲಿ ಮಾಜಿ ರಾಷ್ಟçಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ. ಇದು "ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿ"ಯನ್ನು ಪ್ರತಿಬಿಂಬಿಸುತ್ತದೆ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಮತ್ತು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದೆ.

ಬಾಂಬ್ ಭೀತಿ: ೩ ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡ ರೈಲು ಸಂಚಾರ

ನವದೆಹಲಿ, ಅ. ೧೦: ಕೆಲವು ಶಂಕಿತ ಉಗ್ರರು ಸ್ಫೋಟಕ ವಸ್ತುಗಳೊಂದಿಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪುರಿ-ನವದೆಹಲಿ ಪುರುಷೋತ್ತಮ ಎಕ್ಸ್ಪ್ರೆಸ್ ರೈಲನ್ನು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ತಾತ್ಕಾಲಿಕವಾಗಿ ನಿಲ್ಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಜಾನೆ ಸುಮಾರು ೨.೩೦ ರಿಂದ ೬ ರವರೆಗೂ ರೈಲಿನಲ್ಲಿ ಶೋಧ ಕಾರ್ಯ ನಡೆಸಲಾಯಿತು. ಆದರೆ ಅಂತಹ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬAದಿಲ್ಲದ ಕಾರಣ ಸಾಮಾಜಿಕ ಜಾಲತಾಣ ಎಕ್ಸ್ ಬಳಕೆದಾರರಿಂದ ಪಡೆದ ಮಾಹಿತಿ ಹುಸಿಯಾಗಿತ್ತು ಎಂದು ಅವರು ಹೇಳಿದ್ದಾರೆ.

ರೂ. ೪ ಲಕ್ಷಕ್ಕೆ ಮಗು ಮಾರಾಟ: ವೈದ್ಯೆ ಸೇರಿ ೬ ಮಂದಿ ಬಂಧನ

ದಾವಣಗೆರೆ, ಅ. ೧೦: ನಕಲಿ ದಾಖಲೆಗಳನ್ನು ಸೃಷ್ಟಿಸಿ ನವಜಾತ ಶಿಶುವೊಂದನ್ನು ರೂ. ೪ ಲಕ್ಷಕ್ಕೆ ಮಾರಾಟ ಮಾಡಿದ ಜಾಲ ಭೇದಿಸಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳಾ ಠಾಣೆಯ ಪೊಲೀಸರು, ವೈದ್ಯೆ ಸೇರಿ ೬ ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ದಾವಣಗೆರೆಯ ಎಂ.ಕೆ.ಮೆಮೋರಿಯಲ್ ಆಸ್ಪತ್ರೆಯ ವೈದ್ಯೆ ಭಾರತಿ, ಶಿಶುವಿನ ತಾಯಿ ಕಾವ್ಯಾ, ಶಿಶು ಖರೀದಿಸಿದ್ದ ಜಯಾ ಹಾಗೂ ಪ್ರಶಾಂತ್ ಕುಮಾರ್ ದಂಪತಿ, ಮಧ್ಯವರ್ತಿಗಳಾದ ವಾದಿರಾಜ್, ಮಂಜಮ್ಮ, ಬಂಧಿತರು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಅಪರಾಧವನ್ನು ಒಪ್ಪಿಕೊಂಡಿದ್ದು, ಪೊಲೀಸರು ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಾರಾಟವಾಗಿದ್ದ ಎರಡೂವರೆ ತಿಂಗಳ ಗಂಡು ಶಿಶುವಿಗೆ ಮಕ್ಕಳ ಆರೈಕೆ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ.