x

ಕೂಡಿಗೆ, ಅ. ೧೦: ಕೂಡುಮಂಗಳೂರು- ಕೂಡ್ಲೂರು ಅವಳಿ ಗ್ರಾಮಗಳ ಗ್ರಾಮ ದೇವತೆಯಾದ ದೊಡ್ಡಮ್ಮ ತಾಯಿ ದೇವಾಲಯದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯದ ಆವರಣದಲ್ಲಿ ತಾಯಿಗೆ ಅಭಿಷೇಕ ಸೇರಿದಂತೆ ವಿವಿಧ ಹೋಮ ಹವನ ಪೂಜಾ ಕೈಂಕರ್ಯಗಳು ನಡೆದವು. ಸಂಜೆ ೭ಕ್ಕೆ ಪೂಜೆ ಮಹಾಮಂಗಳಾರತಿ ಪ್ರಸಾದ ವಿನಿಯೋಗ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯ ಮತ್ತು ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ದೇವಾಲಯ ಆವರಣದಲ್ಲಿ ನಡೆದವು.

ದೊಡ್ಡಮ್ಮ ತಾಯಿ ಟ್ರಸ್ಟ್ನ ಅಧ್ಯಕ್ಷ ಕೆ.ಎನ್. ಪವನ್ ಕುಮಾರ್ ಸೇರಿದಂತೆ ಸಮಿತಿಯ ಸದಸ್ಯರು, ನಿರ್ದೇಶಕರು, ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು.