ಮೂರ್ನಾಡು, ಅ. ೧೦: ಮೂರ್ನಾಡು ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ - ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ಮೂರ್ನಾಡು ವಿದ್ಯಾಸಂಸ್ಥೆ ಆಟದ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಕ್ಲಸ್ಟರ್ ಸಂಪನ್ಮೂಲ ಅಧಿಕಾರಿಗಳಾದ ಉಷಾ ಅವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಮುಂಡAಡ ಅಪ್ಪಚ್ಚು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೂರ್ನಾಡು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಬಿ.ಎಸ್. ಕುಶನ್ ರೈ, ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ದೇವಕಿ ಪಿ.ಎಂ., ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಚೇಂದ್ರಿಮಾಡ ಗಿಲ್ ಸೋಮಯ್ಯ, ಬಡುವಂಡ ಎಂ. ಅರುಣ್ ಅಪ್ಪಚ್ಚು, ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮುಕ್ಕಾಟಿರ ಸುಮಿತ ಮುದ್ದಪ್ಪ, ಉಪಪ್ರಾಂಶುಪಾಲೆ ಬಟ್ಟೀರ ಹೇಮಾವತಿ ಮಂದಣ್ಣ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಮುಂಡAಡ ಅಪ್ಪಚ್ಚು ಅವರು ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಮೂರ್ನಾಡು ಗ್ರಾ.ಪಂ. ಅಧ್ಯಕ್ಷ ಬಿ.ಎಸ್. ಕುಶನ್ ರೈ ಅವರು ಕ್ರೀಡಾಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜು - ಮೂರ್ನಾಡು, ಸಂತ ಮೈಕಲರ ಪದವಿಪೂರ್ವ ಕಾಲೇಜು - ಮಡಿಕೇರಿ, ಸರಕಾರಿ ಪದವಿ ಪೂರ್ವ ಕಾಲೇಜು - ಮಡಿಕೇರಿ, ಕಾವೇರಿ ಪದವಿಪೂರ್ವ ಕಾಲೇಜು - ಭಾಗಮಂಡಲದ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗಿಯಾದರು. ಕ್ರೀಡಾಕೂಟದಲ್ಲಿ ವಿವಿಧ ಕಾಲೇಜು ಗಳ ವಿದ್ಯಾರ್ಥಿಗಳು ಭಾಗಿಯಾಗಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಗಳಿಸಿಕೊಂಡರು. ತಾಲೂಕುಮಟ್ಟದ ಚಾಂಪಿಯನ್ ಆಗಿ ಮಡಿಕೇರಿ ಸಂತ ಮೈಕಲರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಹೊರಹೊಮ್ಮಿದರು.