ಚೆಯ್ಯಂಡಾಣೆ, ಅ. ೧೦: ನರಿಯಂದಡ ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆ ಹಾಗೂ ಪರಿಕರಗಳ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭ ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೨೫ ವರ್ಷಗಳ ಕಾಲ ಪ್ರಯೋಗಾಲ ಯದ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಲೀಲಾವತಿ ಯವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸ ಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ, ಆಶಾಕಾರ್ಯಕರ್ತೆ, ಆರೋಗ್ಯ ಕೇಂದ್ರ, ಸರಕಾರಿ ಶಾಲೆಗಳಿಗೆ ಉಪಯೋಗವಾಗುವ ವಾಟರ್ ಫಿಲ್ಟರ್, ಕ್ರೀಡಾ ಪರಿಕರ, ಜಾಕೆಟ್, ಟಿಫನ್ ಬಾಕ್ಸ್ ಮತ್ತಿತರ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಮಾಜಿ ಅಧ್ಯಕ್ಷ ರಾಜೇಶ್ ಅಚ್ಚಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾ.ಪಂ. ಸದಸ್ಯರಾದ ಬಿ.ಎಸ್. ಪುಷ್ಪ, ವಾಣಿ, ರಾಣಿ ಗಣಪತಿ, ಮಂಜುಳಾ, ಸುಬೈರ್, ಮಮ್ಮದ್, ಗ್ರಂಥಪಾಲಕಿ ರೆನಿ, ಅಂಗನವಾಡಿ ಕಾರ್ಯಕರ್ತೆ, ಆಶಾಕಾರ್ಯಕರ್ತೆ, ಶಿಕ್ಷಕ ವೃಂದ, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಸಾರ್ವಜನಿಕರು, ಮತಿತ್ತರರು ಉಪಸ್ಥಿತರಿದ್ದರು.