ಸೋಮವಾರಪೇಟೆ, ಅ. ೧೩: ನಾವು ಪ್ರತಿಷ್ಠಾನ ಸಂಸ್ಥೆಯ ಯುವಿನ್ ಅಕಾಡೆಮಿಯಲ್ಲಿ ಷಟಲ್ ಬ್ಯಾಡ್ಮಿಂಟನ್‌ನಲ್ಲಿ ತರಬೇತಿ ಪಡೆದು ಕಾಲೇಜು ಹಂತದಲ್ಲಿ ರಾಜ್ಯ ಹಾಗೂ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುವ ಉದಯೋನ್ಮುಖ ಆಟಗಾರರನ್ನು ನಾವು ಪ್ರತಿಷ್ಠಾನ ಸಂಸ್ಥೆಯಿAದ ಸನ್ಮಾನಿಸಲಾಯಿತು.

ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುವ ಸೋಮವಾರಪೇಟೆಯ ಅಕ್ಷಯ್ ಮುರುಳೀಧರ್, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಯಡೂರು ಗ್ರಾಮದ ಧನ್ಯ ಸತೀಶ್, ಪುಷ್ಪಾಂಜಲಿ ನಾಗೇಶ್, ಹಿರಿಕರ ಗ್ರಾಮದ ಜೀವಿತ ರಮೇಶ್, ಸೋಮವಾರಪೇಟೆಯ ಲಿಖಿತ್ ಕೃಪಾಲ್ ಅವರುಗಳನ್ನು ಪೋಷಕರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.

ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಅಕ್ಷಯ್, ಮುಂದೆ ನವದೆಹಲಿಯಲ್ಲಿ ನಡೆಯುವ ರಾಷ್ಟಿçÃಯ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನ್ಯ, ಪುಷ್ಪಾಂಜಲಿ ಹಾಗೂ ಜೀವಿತ ಅವರುಗಳು ತಾ.೧೫ರಂದು ಮೈಸೂರು ಮಾನಸ ಗಂಗೋತ್ರಿಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ತಂಡವನ್ನು ಪ್ರತಿನಿಧಿಸಲಿದ್ದಾರೆ. ಲಿಖಿತ್ ಮಂಗಳೂರು ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಹಾಗೂ ತರಬೇತುದಾರ ಗೌತಮ್ ಕಿರಗಂದೂರು ಹೇಳಿದರು. ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಅವರುಗಳು ಸೌಲಭ್ಯಗಳ ಕೊರತೆಯಿಂದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಬ್ಯಾಡ್ಮಿಂಟನ್ ಗೆ ಸಂಬAಧಿಸಿದAತೆ ಸೋಮವಾರಪೇಟೆ ಪಟ್ಟಣದಲ್ಲಿ ಸರ್ಕಾರಕ್ಕೆ ಸೇರಿದ ಒಳಾಂಗಣ ಕ್ರೀಡಾಂಗಣವಿಲ್ಲ. ಹಲವು ಪ್ರತಿಭಾವಂತ ಕ್ರೀಡಾಪಟುಗಳು ಅಕಾಡೆಮಿಗಳಲ್ಲಿ ಹಣ ಕೊಟ್ಟು ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಆಟಗಾರರಿಗೆ ಸರಿಯಾದ ಕೋಚಿಂಗ್ ಸಿಗದ ಕಾರಣ, ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ತಂಡ ಸೋಲು ಅನುಭವಿಸುವಂತಹ ದುಸ್ಥಿತಿ ಇದೆ ಎಂದು ನೋವು ತೋಡಿಕೊಂಡರು.

ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕಿ ಸುಮನಾ ಮ್ಯಾಥ್ಯೂ ಮಾತನಾಡಿ, ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಇದು ಕಲಿಕೆಗೆ ಪೂರಕವಾಗಿದೆ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಸಾಧಕ ಮಕ್ಕಳ ಪೋಷಕರಾದ ಎಸ್.ಎ.ಮುರುಳೀಧರ್, ಶಮಂತಾ ಕೃಪಾಲ್, ಭಾರತಿ ಸತೀಶ್, ರೇಣುಕಾ ರಮೇಶ್, ಯಡೂರು ನಾಗೇಶ್, ಸಾಹಿತಿಗಳಾದ ಶರ್ಮಿಳಾ ರಮೇಶ್, ಸಂಪನ್ಮೂಲ ವ್ಯಕ್ತಿ ಪದ್ಮಾವತಿ ಇದ್ದರು.