ಮಡಿಕೇರಿ, ಅ.೧೫: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾ. ೧೭ ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ೭.೪೦ ಗಂಟೆಗೆ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿಭವನದಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.