ಕುಶಾಲನಗರ, ಅ. ೧೫: ಆಡಳಿತ ಮಂಡಳಿ ಸದಸ್ಯರು, ಕ್ಷೇತ್ರದ ಶಾಸಕರು ಮತ್ತು ಅಧಿಕಾರಿಗಳ ಸಹಕಾರದೊಂದಿಗೆ ಕುಶಾಲನಗರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಕುಶಾಲನಗರ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ಆಯ್ಕೆಕೊಂಡ ಜಯಲಕ್ಷಿö್ಮ ಚಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ‘ಶಕ್ತಿ'ಯೊಂದಿಗೆ ಮಾತನಾಡಿ ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ನೀಡಿದ ಹಾಗೂ ಅತಿ ಶೀಘ್ರದಲ್ಲಿ ಬೆಳವಣಿಗೆ ಕಂಡಿರುವ ಕುಶಾಲನಗರ ಪಟ್ಟಣದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸದವಕಾಶ ಲಭಿಸಿದ್ದು ಆ ಮೂಲಕ ಮುಂದಿನ ದಿನಗಳಲ್ಲಿ ಸ್ವಚ್ಛ ಕುಶಾಲನಗರ ಹಾಗೂ ಸ್ವಚ್ಛ ಕಾವೇರಿ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.

ಕುಶಾಲನಗರದಲ್ಲಿ ನೆನೆಗುದಿಗೆ ಬಿದ್ದಿರುವ ಒಳಚರಂಡಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುವ ನಿಟ್ಟಿನಲ್ಲಿ ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಪಟ್ಟಣ ಪಂಚಾಯಿತಿಯ ಅಪೂರ್ಣಗೊಂಡಿರುವ ವಾಣಿಜ್ಯ ಸಂಕೀರ್ಣವನ್ನು ಪೂರ್ಣಗೊಳಿಸುವ ಸಲುವಾಗಿ ಮುಂದಿನ ಸಭೆಗಳಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಮೂಲಕ ಸರ್ಕಾರದಿಂದ ಪಟ್ಟಣದ ಅಭಿವೃದ್ಧಿಗೆ ಅನುದಾನ ಈಗಾಗಲೇ ಬಿಡುಗಡೆಗೊಂಡಿದ್ದು ಕಲಾಭವನ ಲೋಕಾರ್ಪಣೆ, ಜೊತೆಗೆ ಎಲ್ಲಾ ವಾರ್ಡ್ಗಳ ಸಮಸ್ಯೆಗಳಿಗೆ ಸ್ಪಂದನ ನೀಡಲಾಗುವುದು ಎಂದು ಅವರು ಹೇಳಿದರು.

ಕುಶಾಲನಗರ ಪಟ್ಟಣದ ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಳ್ಳುವ ಸಮಸ್ಯೆಗೆ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರ ಕಂಡು ಹಿಡಿಯಲಾಗುವುದು ಎಂದು ಜಯಲಕ್ಷ್ಮಿ ಅವರು ತಿಳಿಸಿದ್ದಾರೆ. ಕುಶಾಲನಗರದ ಸಾಯಿ ಬಡಾವಣೆ ಮತ್ತು ಕುವೆಂಪು ಬಡಾವಣೆಗಳಲ್ಲಿ ಈಗಾಗಲೇ ತಡೆಗೋಡೆ ಕಾಮಗಾರಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಸಂದರ್ಭ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿ ರದ್ದಾಗಿದ್ದು, ಈಗಾಗಲೇ ಸರಕಾರದಿಂದ ಒಟ್ಟು ಏಳು ಮಂದಿ ಪ್ರತಿನಿಧಿಗಳು ನಾಮನಿರ್ದೇಶನ ಗೊಂಡಿದ್ದಾರೆ.

ಪುರಸಭೆಗೆ ವಿಲೀನಗೊಂಡಿರುವ ಗ್ರಾಮದ ನಾಗರಿಕರ ಸಮಸ್ಯೆಗೆ ಅಲ್ಲಿನ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಅವರು ಹೇಳಿದರು. ಕುಶಾಲನಗರ ೧೩ನೇ ವಾರ್ಡ್ನಿಂದ ಚುನಾಯಿತರಾದ ಜಯಲಕ್ಷಿö್ಮ ಚಂದ್ರ ಅವರು, ತಮ್ಮ ವಾರ್ಡಿನ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೂಡ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಕುಶಾಲನಗರ ಪಟ್ಟಣದ ಎರಡನೇ ವಾರ್ಡಿನಲ್ಲಿ ವಿಜೇತರಾದ ಪುಟ್ಟಲಕ್ಷö್ಮಮ್ಮ ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.