ನಾಪೋಕ್ಲು, ಅ. ೧೫: ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ರಂಗಧಾಮಪ್ಪ ಅವರಿಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯ ವಿನ್ಯಾಸದ ಸ್ವರೂಪದ ಬದಲಾವಣೆಯ ಕುರಿತು ಮನವಿಯನ್ನು ಬುಧವಾರ ಸಲ್ಲಿಸಲಾಯಿತು.

ಸಮಾಜ ವಿಜ್ಞಾನ ಶಿಕ್ಷಕರ ಸಂಘದ ಜಿಲ್ಲಾ ಸಂಚಾಲಕ ಪರಮೇಶ್ ಮಾತನಾಡಿ, ಕಲಿಕೆಯಲ್ಲಿ ಸರಾಸರಿ ಮಟ್ಟಕ್ಕಿಂತಲೂ ಕೆಳಗಿರುವ ವಿದ್ಯಾರ್ಥಿಗಳು ಸುಲಭವಾಗಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ವಿದ್ಯಾರ್ಥಿ ಸ್ನೇಹಿ ಪತ್ರಿಕೆ ರೂಪಿಸುವಂತೆ ಮನವಿ ಮಾಡಿದರು. ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಅಖಿಲ ಪ್ರಶ್ನೆ ಪತ್ರಿಕೆಯನ್ನು ರೂಪಿಸಲಾಗುತ್ತಿದೆ. ಎಸ್.ಎಸ್.ಎಲ್.ಸಿ. ಸಮಾಜ ವಿಜ್ಞಾನ ವಿಜ್ಞಾನ ಗಣಿತ ವಿಷಯಗಳಲ್ಲಿ ಕಷ್ಟಕರ ಪ್ರಶ್ನೆಗಳನ್ನು ನೀಡಲಾಗುತ್ತಿದೆ. ಇದರಿಂದ ಅಂಕಗಳಿಸುವ ಪ್ರಮಾಣ ಕಡಿಮೆಯಾಗುತ್ತಿದೆ ಎಂದರು.

ಈ ಸಂದರ್ಭ ಸೋಮವಾರಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹೆಚ್.ಜಿ. ಕುಮಾರ್, ಸಮಾಜ ವಿಜ್ಞಾನದ ಜಿಲ್ಲಾ ಪ್ರಮುಖರಾದ ಸುರೇಶ್, ಶಿಕ್ಷಕರಾದ ಹ್ಯೂಬರ್ಟ್ ಉಪಸ್ಥಿತರಿದ್ದರು.