ಮಡಿಕೇರಿ, ಅ. ೧೭: ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಟ ೩ ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ರೂ. ೩ ಸಾವಿರ ಸಂಭಾವನೆ ನಿಗದಿಗೊಳಿಸಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ.

ಅರ್ಜಿಗಳನ್ನು ಪ್ರಮಾಣ ಪತ್ರಗಳೊಂದಿಗೆ ತಾ. ೧೯ ರಂದು ಸಂಜೆ ೫.೩೦ ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ, ಕೊಡಗು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸುವುದು. ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯಿಂದ ಪಡೆಯಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ತಿಳಿಸಿದ್ದಾರೆ.