*ಗೋಣಿಕೊಪ್ಪ, ಅ. ೧೭: ಕಾನೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ತಾ. ೨೬ ರಂದು ನಡೆಯಲಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ಟಿ. ದೇವಿ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.

ನೋಡೆಲ್ ಅಧಿಕಾರಿಯಾಗಿ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಕಚೇರಿಯ ತಾಲೂಕು ಯೋಜನಾಧಿಕಾರಿ ಮೋಹನ್ ಉಪಸ್ಥಿತಿಯಲ್ಲಿ ಕಾನೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾಹಿತಿ ನೀಡಿದ್ದಾರೆ.