ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲಿ ದೊಡ್ಡ-ದೊಡ್ಡ ನಟರೊಟ್ಟಿಗೆ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ನಡುವೆ ಮಹತ್ತರ ಗೌರವೊಂದಕ್ಕೆ ರಶ್ಮಿಕಾ ಪಾತ್ರರಾಗಿದ್ದಾರೆ. ಸೈಬರ್ ಭದ್ರತೆಗೆ ರಾಯಭಾರಿ ಆಗಿದ್ದಾರೆ ರಶ್ಮಿಕಾ ಮಂದಣ್ಣ.

ಕೇAದ್ರ ಗೃಹ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐ೪ಸಿ (ಇಂಡಿಯನ್ ಸೈಬರ್‌ಕ್ರೆöÊಂ ಕೋಆರ್ಡಿನೇಷನ್ ಸೆಂಟರ್) ರಶ್ಮಿಕಾ ಮಂದಣ್ಣರನ್ನು ಭಾರತೀಯ ಸೈಬರ್ ಸುರಕ್ಷಾ ಕಾರ್ಯಕ್ರಮದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ ಇನ್ನು ಮುಂದೆ ಅಪಾಯಕಾರಿ ಸೈಬರ್ ಕ್ರೆöÊಂ, ಡೀಪ್ ಫೇಕ್ ವೀಡಿಯೋ, ಆನ್‌ಲೈನ್ ಫ್ರಾಡ್, ಇನ್ನಿತರೆ ಸೈಬರ್ ಸಂಬAಧಿ ಅಪರಾಧಗಳ ಕುರಿತಾಗಿ ಸಾಕ್ಷರತೆ, ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ರಶ್ಮಿಕಾ ಮಂದಣ್ಣ, ‘ಸೈಬರ್ ಅಪರಾಧವು ಅಪಾಯಕಾರಿ ಮತ್ತು ವ್ಯಾಪಕವಾದ ಸಮಸ್ಯೆಯಾಗಿದೆ. ಇದು ಪ್ರಪಂಚದಾದ್ಯAತ ಇರುವ ವ್ಯಕ್ತಿಗಳು, ವ್ಯವಹಾರಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ. ಸೈಬರ್ ಸಮಸ್ಯೆಯನ್ನು ಅನುಭವಿಸಿರುವ ವ್ಯಕ್ತಿಯಾಗಿ, ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ಸೈಬರ್ ಸುರಕ್ಷತೆಯ ಸಂದೇಶವನ್ನು ಪ್ರಚಾರ ಮಾಡಲು ನಾನು ಉತ್ಸುಕಗಳಾಗಿದ್ದೇನೆ. ಈ ಕಾರ್ಯದಲ್ಲಿ ನಾನು ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೇನೆ. ಈ ಸೈಬರ್ ಬೆದರಿಕೆಗಳನ್ನು ಎದುರಿಸಲು ಮತ್ತು ನಮ್ಮ ಡಿಜಿಟಲ್ ಸ್ಥಳಗಳನ್ನು ರಕ್ಷಿಸಲು ನಾವು ಒಗ್ಗೂಡುವುದು ಬಹಳ ಮುಖ್ಯವಾಗಿದೆ’ ಎಂದಿದ್ದಾರೆ.

ಕಳೆದ ವರ್ಷ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಯಾವುದೋ ಯುವತಿಯ ಅರೆಬೆತ್ತಲೆ ವೀಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖವನ್ನು ಜೋಡಿಸಲಾಗಿತ್ತು. ವೀಡಿಯೋ ವೈರಲ್ ಆದ ಬಳಿಕ ಅಮಿತಾಬ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಹಲವರು ಆ ವೀಡಿಯೋವನ್ನು ವಿರೋಧಿಸುವ ಜೊತೆಗೆ ರಶ್ಮಿಕಾಗೆ ಬೆಂಬಲ ಸೂಚಿಸಿದ್ದರು. ಬಳಿಕ ಆ ವೀಡಿಯೋಕ್ಕೆ ಸಂಬAಧಿಸಿದAತೆ ಇಬ್ಬರನ್ನು ಬಂಧಿಸಲಾಗಿತ್ತು.

ರಶ್ಮಿಕಾ ಮಂದಣ್ಣ ಪ್ರಸ್ತುತ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲಿ ವಿಕ್ಕಿ ಕೌಶನ್ ಜೊತೆ ನಟಿಸಿರುವ ‘ಛಾವಾ’ ಬಿಡುಗಡೆ ಆಗಬೇಕಿದೆ. ಇದರ ನಡುವೆ ಸಲ್ಮಾನ್ ಖಾನ್ ಜೊತೆ ‘ಸಿಖಂಧರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ನಟನೆಯ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಇನ್ನು ತೆಲುಗಿನಲ್ಲಿ ‘ಪುಷ್ಪ ೨’, ‘ಗರ್ಲ್ಫ್ರೆಂಡ್’, ವಿಜಯ್ ದೇವರಕೊಂಡ ಜೊತೆಗೆ ‘ಗೀತ ಗೋವಿಂದA ೨’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.