ವೀರಾಜಪೇಟೆ, ಅ. ೧೭ : ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಈ ಬಾರಿ ಲೋಪಗಳಿಲ್ಲದೆ ಅರ್ಥಪೂರ್ಣವಾಗಿ ಆಚರಿಸುವಂತೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ರಾಷ್ಟಿçÃಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಬ್ಬಗಳ ಆಚರಣೆ ಕುರಿತು ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ತಾಲೂಕು ತಹಶೀಲ್ದಾರ್ ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಕುರಿತು ಪೂರ್ವಭಾವಿ ಸಭೆ ನಡೆಯಿತು. ತಹಶೀಲ್ದಾರ್ ರಾಮಚಂದ್ರ ಅವರು, ಸಭೆಗೆ ಅಧಿಕಾರಿಗಳು ಗೈರುಹಾಜರಾಗಿ ನಿರ್ಲಕ್ಷö್ಯ ವಹಿಸುತ್ತಿದ್ದಾರೆ. ಸಭೆಗೆ ಸರ್ವೆ ಇಲಾಖೆಯ ಎ.ಡಿ.ಎಲ್.ಆರ್ ಸೇರಿದಂತೆ ಕೆಲವು ಅಧಿಕಾರಿಗಳು ಗೈರಾಜರಾದ ಕುರಿತು ಆಕ್ಷೇಪಿಸಿದ ಅವರು ಯಾರು ನಿರ್ಲಕ್ಷö್ಯ ವಹಿಸದಂತೆ ಕನ್ನಡ ಕಾರ್ಯಕ್ರಮಗಳಿಗೆ ಮುಂದಾಗಬೇಕು. ಸಂಬAಧಪಟ್ಟ ಹಲವಾರು ಇಲಾಖೆಯ ಅಧಿಕಾರಿಗಳು ಸೂಕ್ತ ಸಹಕಾರ ನೀಡುತ್ತಿಲ್ಲ. ಕನ್ನಡ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದರು. ವಿದ್ಯಾರ್ಥಿಗಳಿಗೆ ಕನ್ನಡ ಪೂರಕವಾದ ಸ್ವರ್ಧಾ ಕಾರ್ಯಕ್ರಮ ರೂಪಿಸಬೇಕು ಹಾಗೂ ಕನ್ನಡಕ್ಕೆ ಹೆಚ್ಚು ಒತ್ತು ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಅವರಿಗೆ ಸೂಚಿಸಿದರು.

ಡಿ.ವೈ.ಎಸ್.ಪಿ ಮೋಹನ್ ಕುಮಾರ್ ಮಾತನಾಡಿ, ಈ ಬಾರಿ ಕನ್ನಡ ಪುಸ್ತಕ ಮಳಿಗೆಯನ್ನು ರಾಜ್ಯೋತ್ಸವ ಕರ‍್ಯಕ್ರಮದಲ್ಲಿ ಆಯೋಜಿಸುವಂತೆ ಸಭೆಯಲ್ಲಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನು ಕೋರಿದರು.

ಈ ಸಂದರ್ಭ ತಹಶೀಲ್ದಾರ್ ರಾಮಚಂದ್ರ ಪುರಸಭೆ ವತಿಯಿಂದ ಅನ್ಯಭಾಷಿಕರು ಸೇರಿದಂತೆ ಎಲ್ಲಾ ಮನೆಗಳಲ್ಲಿ ರಾಜ್ಯೋತ್ಸವ ದಿನ ಕನ್ನಡ ಬಾವುಟ ಹಾರಿಸುವಂತೆ ತಿಳಿಸಬೇಕು. ಸರಕಾರದ ಸೂಚನೆಯಂತೆ ಪುರಸಭೆಯಿಂದ ನಗರದಲ್ಲಿ ಅಂಗಡಿ ಮುಗ್ಗಟ್ಟುಗಳ್ಲಿ ಕನ್ನಡ ನಾಮಫಲಕ ಅಳಡಿಸುವಂತೆ ಪ್ರವೃತ್ತವಾಗಬೇಕು, ಇದಕ್ಕೆ ತಾಲೂಕು ಆಚರಣ ಸಮಿತಿ ಮತ್ತು ಪೊಲೀಸ್ ಇಲಾಖೆ ಜೊತೆಗಿರುತ್ತದೆ ಎಂದರು.

ಕನ್ನಡದಲ್ಲಿ ಶೇ. ೧೦೦ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಕನ್ನಡ ಭಾಷೆಯ ಸಾಧಕರಿಗೆ ಸನ್ಮಾನ ಕುರಿತ ಅರ್ಹರನ್ನು ಗುರುತಿಸುವುದಾಗಿ ತೀರ್ಮಾನಿಸ ಲಾಯಿತು. ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ, ಸರಕಾರಿ ಅಭಿಯೋಜಕ ನರೇಂದ್ರ ಕಾಮತ್, ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.