ಕರಿಕೆ, ಅ. ೧೭: ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರೂ ಆದ ಸುಧೀರ್ ಹೊದ್ದೆಟ್ಟಿ ಅವರನ್ನು ಕೊಡಗು ಅರಣ್ಯ ವೃತ್ತದ ಮಡಿಕೇರಿ ವನ್ಯಜೀವಿ ಉಪ ವಿಭಾಗದ ವತಿಯಿಂದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಇಪ್ಪತ್ತನೆಯ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭ ರಾಜ್ಯ ವನ್ಯಜೀವಿ ಸಲಹಾ ಸಮಿತಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಮಡಿಕೇರಿ ಪ್ರಾದೇಶಿಕ ವಲಯದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಬಿ. ಭಾಸ್ಕರ್, ವನ್ಯಜೀವಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ನೆಹರೂ, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳಾದ ಶ್ರೀನಿವಾಸ ನಾಯಕ್, ಗೋಪಾಲ್ ಸೇರಿದಂತೆ ಅರಣ್ಯ ಅಧಿಕಾರಿಗಳು, ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.