ಮಡಿಕೇರಿ, ಅ. ೧೭: ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಣೆಯಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಸಂಚಾರಿ-ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಕನಿಷ್ಟ ೨೦ ಕುರಿ ಹೊಂದಿದ್ದು, ಸಂಚಾರಿ-ವಲಸೆ ಹೋಗುವ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಚಾರಿ ವಲಸೆ ಕುರಿಗಾಹಿಗಳು ಗುರುತಿನ ಚೀಟಿಯನ್ನು ಪಡೆಯಲು ತಮ್ಮ ವ್ಯಾಪ್ತಿಯ ಸ್ಥಳೀಯ ಪಶುವೈದ್ಯಾಧಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಾ. ೩೧ ರೊಳಗೆ ತಮ್ಮ ತಾಲೂಕಿನ ಸಹಾಯಕ ನಿರ್ದೇಶಕರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕಿದೆ. ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು (ಆಡಳಿತ), ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಹಾಗೂ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿ., ಮೈಸೂರು ಅಥವಾ ದೂ. ೯೮೪೫೬೨೩೧೩೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲೆ