ಕೂಡಿಗೆ, ಅ. ೧೭: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್, ಸೋಮವಾರಪೇಟೆ ತಾಲೂಕು ಲ್ಯಾಂಪ್ಸ್ ಬಸವನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಿರಿಜನರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರುಗಳಿಗೆ ಸಹಕಾರ ಕಾಯ್ದೆ-ಕಾನೂನು ಹಾಗೂ ಸಂಘದ ಅಭಿವೃದ್ಧಿ ಕುರಿತು ಶಿಕ್ಷಣ ಕಾರ್ಯಾಗಾರವು ಬಸವನಹಳ್ಳಿ ಗಿರಿಜನರ ಸಮುದಾಯ ಭವನದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕ ಪಿ.ಬಿ. ಯತೀಶ್ ನೆರವೇರಿಸಿ ಮಾತನಾಡಿ, ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವನಹಳ್ಳಿ ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭಾಗಮಂಡಲ ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ ಮಿಟ್ಟು ರಂಜಿತ್, ತಿತಿಮತಿ ಲ್ಯಾಂಪ್ಸ್ನ ಅಧ್ಯಕ್ಷೆ ಪುಷ್ಪ ಬಸವನಹಳ್ಳಿ ಸಹಕಾರ ಸಂಘದ ನಿರ್ದೇಶಕ ಉದಯ್ ಕುಮಾರ್, ಅರಣ್ಯ ಇಲಾಖೆಯ ಡಿ.ಆರ್‌ಎಫ್ ಜಗದೀಶ್, ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲಾ, ಜಿಲ್ಲಾ ಸಹಕಾರ ಯೂನಿಯನ್‌ಯಾಗಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯೋಗೇಂದ್ರ ನಾಯಕ್, ಸಂಪನ್ಮೂಲ ವ್ಯಕ್ತಿ ರವಿ, ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ವಿವಿಧ ಲ್ಯಾಂಪ್ಸ್ ಅಧ್ಯಕ್ಷರು ಕಾರ್ಯದರ್ಶಿ, ಸದಸ್ಯರು ಭಾಗವಹಿಸಿದ್ದರು.