ಕೂಡಿಗೆ, ಅ. ೨೦: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ನಡೆದ ನಾಲ್ಕು ದಿನಗಳ ಕಾಲ ನಡೆದ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಕುಶಾಲನಗರ ತಾಲೂಕು ವ್ಯಾಪ್ತಿಯ ಕೂಡಿಗೆ ರಾಮೇಶ್ವರ ಕೂಡು ಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಸಂಘದ ಕಾರ್ಯ ವ್ಯಾಪ್ತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು. ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಮೇಳದಲ್ಲಿ ಭಾಗವಹಿಸಿ ಸುಸ್ಥಿರ ಅಡಿಕೆ ಕೃಷಿ, ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ, ಆರ್ಥಿಕ ಸದೃಢತೆಗಾಗಿ ಹಾಗೂ ವಾಣಿಜ್ಯ ಬೆಳೆಗಳ ಮಾಹಿತಿ, ಸೇರಿದಂತೆ ಪ್ರಗತಿಪರ ರೈತರು ಹಾಗೂ ವಿಜ್ಞಾನಗಳಿಂದ ಚರ್ಚಾಗೋಷ್ಠಿಯಲ್ಲಿ ಭಾಗವಹಿಸಿ ಕೃಷಿಗೆ ಸಂಬAಧಿಸಿದAತೆ ಹೊಸ ಆವಿಷ್ಕಾರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದರು.

ಕೃಷಿ ಮೇಳದಲ್ಲಿ ಜಿಲ್ಲೆಯ ಪೊನ್ನಂಪೇಟೆ ಕೃಷಿ ಮತ್ತು ತೋಟಗಾರಿಕಾ ಕಾಲೇಜಿನ ಪ್ರಾಧ್ಯಾಪಕ ತಂಡ ವತಿಯಿಂದ ವಸ್ತು ಪ್ರದರ್ಶನ ದಲ್ಲಿ ಕೃಷಿ ಮಳಿಗೆಯನ್ನು ತೆರೆಯ ಲಾಗಿತ್ತು. ಈ ಸಂದರ್ಭ ಸಹಕಾರ ಸಂಘದ ಉಪಾಧ್ಯಕ್ಷ ಕೆ.ವಿ. ಬಸಪ್ಪ, ಬಸವನಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್, ಸಂಘದ ನಿರ್ದೇಶಕ ರಾದ ಕೆ.ಪಿ. ರಾಜು, ರಾಮಚಂದ್ರ, ಕೃಷ್ಣಗೌಡ, ಜಯಶ್ರೀ, ನಾಗರಾಜು, ರಮೇಶ್, ಕುಮಾರ್ ಸೇರಿದಂತೆ ಪ್ರಗತಿಪರ ರೈತರಾದ ಕೆ.ವಿ. ಸಣ್ಣಪ್ಪ, ನಾಗರಾಜು ಶಶಿಕುಮಾರ್, ಸೋಮಣ್ಣ, ಮಂಜುನಾಥ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.